ಸೌರ ವಿದ್ಯುತ್ ಸೇರಿದಂತೆ ನವೀಕರಿಸಬಹುದಾದ ಇಂಧನ ಮೂಲಗಳು ಭವಿಷ್ಯದ ಇಂಧನಗಳಾಗಿವೆ. ಹೀಗಾಗಿ ಕೆಪಿಸಿಎಲ್‌ನಿಂದ ವಿವಿಧ ವಿದ್ಯುತ್ ಸ್ಥಾವರಗಳಲ್ಲಿ ಸೌರ ವಿದ್ಯುತ್ ಉತ್ಪಾದಿಸಲು ನಿರ್ಧರಿಸಿ ಪ್ರಕ್ರಿಯೆ ಆರಂಭಿಸಲಾಗಿದೆ. ಹಗಲು ವೇಳೆ ಸೌರ ವಿದ್ಯುತ್ ಉತ್ಪಾದಿಸಿ ಪೂರೈಸುವುದು ರಾತ್ರಿ ಶಾಖೋತ್ಪನ್ನ ಮತ್ತು ಜಲ ವಿದ್ಯುತ್ತನ್ನು ಉತ್ಪಾದಿಸಿ ವಿದ್ಯುತ್ ಬೇಡಿಕೆಯನ್ನು ಸಮರ್ಥವಾಗಿ ನಿಭಾಯಿಸುವುದು ಇದರ ಉದ್ದೇಶ