ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೋದಿ ಕನಸು ನನಸು ಮಾಡಲು ಶ್ರಮಿಸುವೆ: ಸೋಮಣ್ಣ

Published 13 ಜೂನ್ 2024, 19:24 IST
Last Updated 13 ಜೂನ್ 2024, 19:24 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗಾಗಿ ಕರ್ನಾಟಕಕ್ಕೆ ಐದು ಸಚಿವ ಸ್ಥಾನಗಳನ್ನು ನೀಡಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು.

ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ನಗರಕ್ಕೆ ಬಂದ ಅವರು ಪಕ್ಷದ ಕಚೇರಿಗೆ ಭೇಟಿ ನೀಡಿ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

‘ಪ್ರಧಾನಿ ಮೋದಿಯವರು ಭಾರತವನ್ನು ವಿಶ್ವದ ಅಗ್ರ ರಾಷ್ಟ್ರವನ್ನಾಗಿ ಮಾಡುವ ಸಂಕಲ್ಪವನ್ನು ತೊಟ್ಟಿದ್ದಾರೆ. ನನಗೂ ಎರಡು ಖಾತೆಗಳ ಜವಾಬ್ದಾರಿ ನೀಡಿದ್ದು, ನಾನು ಅದನ್ನು ಸಮವಾಗಿ ಸ್ವೀಕಾರ ಮಾಡಿ ಅವರ ಕನಸು ನನಸು ಮಾಡಲು ಶ್ರಮವಹಿಸಿ ಕೆಲಸ ಮಾಡುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT