ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷದ ಅಪೇಕ್ಷೆಯಂತೆ ಸೌಮ್ಯಾ ರೆಡ್ಡಿ ಕಣಕ್ಕೆ: ರಾಮಲಿಂಗಾರೆಡ್ಡಿ

Published 13 ಮಾರ್ಚ್ 2024, 15:42 IST
Last Updated 13 ಮಾರ್ಚ್ 2024, 15:42 IST
ಅಕ್ಷರ ಗಾತ್ರ

ಬೆಂಗಳೂರು: ಪಕ್ಷದ ನಾಯಕರು, ಕಾರ್ಯಕರ್ತರ ಅಪೇಕ್ಷೆಯಂತೆ ಸೌಮ್ಯಾ ರೆಡ್ಡಿ ಅವರನ್ನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಸಲಾಗುತ್ತಿದೆ. ಈ ಕುರಿತು ಹೈಕಮಾಂಡ್‌ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ಕೇಂದ್ರದ ಅಧಿಕಾರಿಗಳ ದೋಷಪೂರಿತ ನಿಲುವಿನಿಂದಾಗಿ ಸೌಮ್ಯಾ ರೆಡ್ಡಿ ಸೋಲು ಕಂಡಿದ್ದರು. ಫಲಿತಾಂಶ ಪ್ರಶ್ನಿಸಿ, ಈಗಾಗಲೇ ಕೋರ್ಟ್‌ ಮೆಟ್ಟಿಲೇರಲಾಗಿದೆ. ಶೀಘ್ರ ತೀರ್ಪು ಹೊರಬರಲಿದ್ದು, ಸೌಮ್ಯಾ ಮತ್ತೆ ಶಾಸಕಿಯಾಗುವ ಭರವಸೆ ಇದೆ. ಆದರೆ, ಪಕ್ಷದ ಎಲ್ಲ ನಾಯಕರ ಸಲಹೆಯಂತೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂದರು.

ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ಅವರನ್ನು ಬಿಜೆಪಿ–ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರದಿಂದ ಕಣಕ್ಕೆ ಇಳಿಸಲಾಗುತ್ತಿದೆ. ಅವರು ವೈದ್ಯರಾಗಿ ಕಂಡ ಯಶಸ್ಸು ರಾಜಕಾರಣಿಯಾಗಿ ಸಿಗಲಾರದು. ಅವರ ಪ್ರತಿಭೆ, ಸೇವೆ ಗುರುತಿಸಿ, ಬಿಜೆಪಿ ಅವರನ್ನು ರಾಜ್ಯಸಭೆಯ ಸದಸ್ಯರನ್ನಾಗಿ ಮಾಡಬಹುದಿತ್ತು. ಸಂಸದರಾಗಿ ಡಿ.ಕೆ. ಸುರೇಶ್‌ ಸಾಕಷ್ಟು ಕೆಲಸ ಮಾಡಿದ್ದಾರೆ. ಜನರ ಪ್ರೀತಿ ಗಳಿಸಿದ್ದಾರೆ. ಅವರು ಜನರ ವೈದ್ಯ ಎಂದು ಬಣ್ಣಿಸಿದರು. 

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT