ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪೀಡಿತ ಪ್ರದೇಶದ ರೈತರ ಬೆಳೆ ಹಾನಿಗೆ ಪರಿಹಾರ ಪಾವತಿಗಾಗಿ ₹2,000 ಕೋಟಿ ನಿಗದಿ ಮಾಡಲಾಗಿದ್ದು, 30 ದಿನಗಳ ಒಳಗೆ ರೈತರ ಖಾತೆಗಳಿಗೆ ಪರಿಹಾರದ ಮೊತ್ತ ಪಾವತಿ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ನೈಋತ್ಯ ಮುಂಗಾರು ಅವಧಿಯಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ ಒಟ್ಟು 12.54 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆ ಹಾನಿಯಾಗಿದೆ. ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ಪೂರ್ಣಗೊಳಿಸಿದ 9 ಜಿಲ್ಲೆಗಳಲ್ಲಿನ 5.29 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಗೆ ಮೊದಲ ಸುತ್ತಿನ ಪರಿಹಾರ ಪಾವತಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ಸೆಪ್ಟೆಂಬರ್ ಮೊದಲ ವಾರದವರೆಗೆ ಸುರಿದ ಭಾರಿ ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕೆ ಬೆಳೆ ಪ್ರದೇಶಗಳು ಜಲಾವೃತಗೊಂಡು ಸುಮಾರು 5.29 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಬೆಳೆ ನಷ್ಟವಾದ ಜಿಲ್ಲೆಗಳು ಜಂಟಿ ಸಮೀಕ್ಷೆ ಪೂರ್ಣಗೊಳಿಸಿ ಬೆಳೆ ಹಾನಿ ಪರಿಹಾರ ಪಾವತಿಗೆ ಸಿದ್ಧವಾಗಿದ್ದವು. ತದನಂತರ ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ಸುರಿದ ಮಳೆ ಹಾಗೂ ಮಹಾರಾಷ್ಟ್ರ ಭಾಗದ ಜಲಾಶಯಗಳಿಂದ ಹೊರ ಹರಿಸಲಾದ ನದಿ ಪ್ರವಾಹದಿಂದ ಕಲಬುರಗಿ, ಯಾದಗಿರಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ 7.24 ಲಕ್ಷ ಹೆಕ್ಟೇರ್ ಬೆಳೆ ನಷ್ಟಕ್ಕೆ ಕಾರಣವಾಯಿತು ಎಂದು ಹೇಳಿದ್ದಾರೆ.

ಈ ನಾಲ್ಕು ಜಿಲ್ಲೆಗಳ ಬೆಳೆ ಹಾನಿ ಜಂಟಿ ಸಮೀಕ್ಷೆಯನ್ನು ಪುನಃ ಮಾಡಬೇಕಾದ ಅಗತ್ಯವಿದೆ. ಬೆಳೆ ಹಾನಿ ಪ್ರದೇಶ ಪರಿಷ್ಕರಣೆಗೊಳ್ಳಲಿದ್ದು, 7.24 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯ ಜಂಟಿ ಸಮೀಕ್ಷೆಯು ಪ್ರಗತಿಯಲ್ಲಿದೆ. 10 ದಿನಗಳಲ್ಲಿ ಬೆಳೆ ಹಾನಿ ಪರಿಹಾರ ಪಾವತಿಸಲಾಗುವುದು. ಒಟ್ಟಾರೆ 2025ರ ನೈಋತ್ಯ ಮುಂಗಾರಿನಲ್ಲಿ ಸುಮಾರು 12.54 ಲಕ್ಷ ಹೆಕ್ಟೇರ್ ಬೆಳೆ ಹಾನಿ ಆಗಿರುವುದು ಕಂಡು ಬಂದಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಪ್ರತಿ ಹೆಕ್ಟೇರ್ಗೆ ₹8,500 ಹೆಚ್ಚುವರಿ ಪಾವತಿ ಮಾಡಲಿದೆ ಎಂದೂ ಹೇಳಿದ್ದಾರೆ.

ಆಧಾರ್ ಜೋಡಣೆ ಹೊಂದಿದ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಮತ್ತು ತ್ವರಿತ ಪಾವತಿ ವ್ಯವಸ್ಥೆಯೊಂದಿಗೆ ಬೆಳೆ ಹಾನಿ ಪರಿಹಾರ ಪಾವತಿ ಮಾಡುತ್ತೇವೆ
ಕೃಷ್ಣ ಬೈರೇಗೌಡ ಕಂದಾಯ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.