ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌಜನ್ಯಾ ಪ್ರಕರಣ ಮರು ತನಿಖೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Published 1 ಆಗಸ್ಟ್ 2023, 7:09 IST
Last Updated 1 ಆಗಸ್ಟ್ 2023, 7:09 IST
ಅಕ್ಷರ ಗಾತ್ರ

ಮಂಗಳೂರು: ಕಾನೂನು ಕೈಗೆತ್ತಿಕೊಂಡವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಮಳೆ ಹಾನಿ ಪರಿಶೀಲನೆಗಾಗಿ ಇಲ್ಲಿಗೆ ಆಗಮಿಸಿರುವ ಮುಖ್ಯಮಂತ್ರಿ ಬಜಪೆ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದರು.

ಕರಾವಳಿಯಲ್ಲಿ ಮತೀಯ ಗೂಂಡಾಗಿರಿ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, 'ಯಾರೇ ಕಾನೂನು ಕೈಗೆತ್ತಿಕೊಂಡರೂ ತಪ್ಪು. ಕಾನೂನು ಕೈಗೆತ್ತಿಕೊಳ್ಳುವುದಕ್ಕೆ ಯಾರಿಗೂ ಅವಕಾಶ ನೀಡಬೇಡಿ. ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ' ಎಂದರು.

'ಧರ್ಮಸ್ಥಳದ ಸೌಜನ್ಯಾ ಪ್ರಕರಣ ಸಿಬಿಐ ತನಿಖೆ ನಡೆಸಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧವಾಗಿ ಮೇಲ್ಮನವಿ ಸಲ್ಲಿಸುವಂತೆ ಕುಟುಂಬದವರು ಒತ್ತಾಯಿಸಿದ್ದಾರೆ. ತೀರ್ಪನ್ನು ಓದಿಲ್ಲ. ಓದಿ ನಂತರ ಈ ಬಗ್ಗೆ ಪರಿಶೀಲಿಸುತ್ತೇನೆ' ಎಂದರು.

ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತ ಕಸ್ತೂರಿರಂಗನ್ ವರದಿ ಅನುಷ್ಠಾನದ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಪರಿಸರ ರಕ್ಷಣೆ ನಾವು ಬದ್ಧ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಟ್ ಕಾಯಿನ್ ಹಗರಣದ ತನಿಖೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, 'ಬಿಟ್ ಕಾಯಿನ್ ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಿದ್ದೇವೆ. ಹೀಗೆಯೇ ತನಿಖೆ ಮಾಡಿ ಎನ್ನಲು ಆಗುತ್ತದೆಯೇ' ಎಂದರು.

'ಕರಾವಳಿ ಪ್ರದೇಶದ ಅಭಿವೃದ್ಧಿಗೆ ಬಜೆಟ್‌ನಲ್ಲಿ ಕಾರ್ಯಕ್ರಮಗಳನ್ನು ಪ್ರಕಟಿಸಿದ್ದೇವೆ. ಕರಾವಳಿ ಪ್ರದೇಶದಲ್ಲಿ ಮಳೆ ಜಾಸ್ತಿ ಆಗಿದೆ. ಅದರ ಪರಿಶಿಲನೆ ಬಂದಿದ್ದೇನೆ' ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT