ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಷ್ಟಾಚಾರ ಮರೆತ ಸಭಾಧ್ಯಕ್ಷ ಖಾದರ್‌!

Published 17 ಜುಲೈ 2023, 23:30 IST
Last Updated 17 ಜುಲೈ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಭಾಗವಹಿಸಲು ನಗರದ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ಗೆ ಬಂದಿರುವ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಎಐಸಿಸಿ ನಾಯಕರನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮತ್ತು ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಭೇಟಿ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.

ಸಭಾಧ್ಯಕ್ಷ ಮತ್ತು ಉಪಸಭಾಧ್ಯಕ್ಷರಾಗಿ ಆಯ್ಕೆಯಾದವರು ಪಕ್ಷದ ಚಟುವಟಿಕೆಯಿಂದ ದೂರ ಇರುತ್ತಾರೆ. ಆದರೆ, ಖಾದರ್‌ ಮತ್ತು ಲಮಾಣಿ ಅವರು ಈ ಶಿಷ್ಟಾಚಾರ ಮರೆತು ಬಿಜೆಪಿಯೇತರ ಪಕ್ಷಗಳ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದರು.

ಸಚಿವರಾದ ಜಿ. ಪರಮೇಶ್ವರ, ಕೆ.ಎಚ್‌ ಮುನಿಯಪ್ಪ,‌ ಎಂ.ಬಿ. ಪಾಟೀಲ, ಎಚ್‌.ಕೆ. ಪಾಟೀಲ, ದಿನೇಶ್ ಗುಂಡೂರಾವ್, ಸತೀಶ ಜಾರಕಿಹೊಳಿ,  ವಿಧಾನ ಪರಿಷತ್‌ ಸದಸ್ಯ ಬಿ.ಕೆ‌. ಹರಿಪ್ರಸಾದ್ ಕೂಡಾ ಎಐಸಿಸಿ ನಾಯಕರನ್ನು ಭೇಟಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT