ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸುವರ್ಣ ವಿಧಾನಸೌಧದ ಮುಂಭಾಗ ಡಿ.12ಕ್ಕೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ: ಖಾದರ್‌

Published 8 ಡಿಸೆಂಬರ್ 2023, 15:56 IST
Last Updated 8 ಡಿಸೆಂಬರ್ 2023, 15:56 IST
ಅಕ್ಷರ ಗಾತ್ರ

ಬೆಳಗಾವಿ: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಇದೇ 12ರಂದು ಸುವರ್ಣ ವಿಧಾನಸೌಧದಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ತಿಳಿಸಿದರು.

ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರ ಜತೆ ಶುಕ್ರವಾರ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.

ಈ ಸಂಬಂಧ ರಾಜ್ಯದಾದ್ಯಂತ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುತ್ತಿದೆ. ಅದರ ಭಾಗವಾಗಿ ಸುವರ್ಣ ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಆಚರಿಸಲು ನಿರ್ಧರಿಸಲಾಗಿದೆ. ಅಂದು ಸಂಜೆ 6 ಗಂಟೆಯಿಂದ ಕಾರ್ಯಕ್ರಮ ಆರಂಭವಾಗಲಿದೆ. ಒಂದು ಗಂಟೆ ಸಭಾ ಕಾರ್ಯಕ್ರಮ ನಡೆಯಲಿದೆ. ಆ ಬಳಿಕ ಎರಡೂವರೆ ಗಂಟೆ ಅವಧಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆಳ್ವಾಸ್‌ ನುಡಿಸಿರಿಯ 250ಕ್ಕೂ ಹೆಚ್ಚಿನ ಕಲಾವಿದರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಭಾಪತಿಗಳು ಮತ್ತು ಮಾಜಿ ಸಭಾಧ್ಯಕ್ಷರನ್ನು ಸನ್ಮಾನಿಸಲಾಗುವುದು ಎಂದು ಖಾದರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT