ಕೆ.ಆರ್.ಪೇಟೆ (ಮಂಡ್ಯ ಜಿಲ್ಲೆ): ‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಆರೋಗ್ಯ ಸುಧಾರಿಸಲೆಂದು ಪ್ರಾರ್ಥಿಸಿ ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲು ತಾಲ್ಲೂಕಿನ 360 ಗ್ರಾಮಗಳ ಗಣೇಶೋತ್ಸವ ಪೂಜಾ ಸಮಿತಿಗಳಿಗೆ ಬಸ್ ತಿಮ್ಮೇಗೌಡ ಚಾರಿಟಬಲ್ ಟ್ರಸ್ಟ್‌ನಿಂದ ತಲಾ ₹5 ಸಾವಿರ ಧನಸಹಾಯ ನೀಡಲಾಗುವುದು’ ಎಂದು ಟ್ರಸ್ಟ್ ಅಧ್ಯಕ್ಷ ಹಾಗೂ ಪುರಸಭಾ ಸದಸ್ಯ ಬಸ್ ಸಂತೋಷ್ ಕುಮಾರ್ ತಿಳಿಸಿದರು.

ಪಟ್ಟಣದ ಬಸವೇಶ್ವರ ನಗರದಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಗೆ ಪೂಜೆ ಸಲ್ಲಿಸಿ ದೇಣಿಗೆ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಜೆಡಿಎಸ್ ಸದೃಢವಾಗಿ ಬೆಳೆದು ಅಧಿಕಾರಕ್ಕೆ ಬರಬೇಕಾದರೆ ದೇವೇಗೌಡರು ಆರೋಗ್ಯವಂತರಾಗಿರಬೇಕು. ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ಪ್ರತಿಷ್ಠಾಪಿಸಿರುವ ವಿಘ್ನ ನಿವಾರಕನ ಮೂರ್ತಿಗಳಿಗೆ ದೇವೇಗೌಡರ ಹೆಸರಿನಲ್ಲಿ ಅರ್ಚನೆ, ವಿಶೇಷ ಪೂಜೆ ಸಲ್ಲಿಸುವಂತಾಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.