ಮಂಗಳೂರು: ಬೆಂಗಳೂರು– ಮಂಗಳೂರು ನಡುವೆ ಇದೇ 26ರಿಂದ ಆ. 30ರವರೆಗೆ ವಾರದಲ್ಲಿ ಮೂರು ದಿನ ವಿಶೇಷ ರೈಲು ಸಂಚಾರ ಆರಂಭಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

ಬೆಂಗಳೂರು ನಗರ ಜಂಕ್ಷನ್ ಹಾಗೂ ಮಂಗಳೂರು ಸೆಂಟ್ರಲ್ ನಿಲ್ದಾಣಗಳ ನಡುವೆ ಮೈಸೂರು ಮಾರ್ಗದಲ್ಲಿ ಈ ರೈಲು ಸಂಚರಿಸಲಿದೆ. ಬೆಂಗಳೂರು ಸಿಟಿ ಜಂಕ್ಷನ್ ನಿಲ್ದಾಣದಿಂದ ರಾತ್ರಿ 8.30ಕ್ಕೆ ಹೊರಡುವ ರೈಲು ಮರುದಿನ ಬೆಳಿಗ್ಗೆ 9.05ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣವನ್ನು ತಲುಪಲಿದೆ. ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಸಂಜೆ 6.35ಕ್ಕೆ ಹೊರಡುವ ರೈಲು ಮರುದಿನ ಬೆಳಿಗ್ಗೆ 6.15ಕ್ಕೆ ಬೆಂಗಳೂರು ನಗರ ಜಂಕ್ಷನ್ ನಿಲ್ದಾಣವನ್ನು ತಲುಪಲಿದೆ.

ಬೆಂಗಳೂರಿನಿಂದ ಪ್ರತಿ ಭಾನುವಾರ, ಮಂಗಳವಾರ ಹಾಗೂ ಗುರುವಾರ 06547 ಸಂಖ್ಯೆಯ ರೈಲು ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಪ್ರತಿ ಸೋಮವಾರ, ಬುಧವಾರ ಮತ್ತು ಶುಕ್ರವಾರ 06548 ಸಂಖ್ಯೆಯ ರೈಲು ಬೆಂಗಳೂರಿಗೆ ಪ್ರಯಾಣ ಬೆಳೆಸಲಿದೆ ಎಂದು ರೈಲ್ವೆ ಇಲಾಖೆಯ ಮೂಲಗಳು ತಿಳಿಸಿವೆ.

ಶಿರಾಡಿ ಘಾಟಿಯಲ್ಲಿ ವಾಹನ ಸ್ಥಗಿತಗೊಂಡಿರುವುದರಿಂದ ಇತರ ಘಾಟಿಗಳ ಮೂಲಕ ರಸ್ತೆಗಳ ಮೇಲೆ ವಾಹನಗಳ ದಟ್ಟಣೆ ಹೆಚ್ಚಾಗಿದೆ. ಇದರಿಂದ ಪ್ರಯಾಣಿಕರಿಗೆ ಅನನುಕೂಲ ಉಂಟಾಗುವುದನ್ನು ತಪ್ಪಿಸಲು ವಿಶೇಷ ರೈಲು ಸೇವೆ ಆರಂಭಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಅವರು ಇತ್ತೀಚೆಗೆ ಕೇಂದ್ರ ರೈಲ್ವೆ ಸಚಿವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದರು. ಪಶ್ಚಿಮ ಕರಾವಳಿ ರೈಲು ಯಾತ್ರಾ ಅಭಿವೃದ್ಧಿ ಸಮಿತಿಯೂ ಈ ಬಗ್ಗೆ ಮನವಿ ಸಲ್ಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.