ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗಣೇಶ ಚತುರ್ಥಿ: ಪ್ರಯಾಣಿಕರ ದಟ್ಟಣೆ ಕಡಿಮೆಗೊಳಿಸಲು ವಿಶೇಷ ರೈಲು

Published 16 ಆಗಸ್ಟ್ 2024, 16:10 IST
Last Updated 16 ಆಗಸ್ಟ್ 2024, 16:10 IST
ಅಕ್ಷರ ಗಾತ್ರ

ಬೆಂಗಳೂರು: ಗಣೇಶ ಚತುರ್ಥಿ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ಬೆಂಗಳೂರಿನಿಂದ ಬೆಳಗಾವಿ ಮತ್ತು ವಿಜಯಪುರ ಮಾರ್ಗಗಳಲ್ಲಿ ವಿಶೇಷ ರೈಲು ಕಾರ್ಯಾಚರಣೆ ನಡೆಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.

ಸೆಪ್ಟೆಂಬರ್ 5 ರಂದು ಸಂಜೆ 7.30ಕ್ಕೆ ಯಶವಂತಪುರದಿಂದ ಹೊರಡುವ ರೈಲು ಸೆ.6ರಂದು ಬೆಳಿಗ್ಗೆ 7.15ಕ್ಕೆ ಬೆಳಗಾವಿ ತಲುಪಲಿದೆ. ಅಂದು ಬೆಳಿಗ್ಗೆ 8.45ಕ್ಕೆ ಬೆಳಗಾವಿಯಿಂದ ಹೊರಟು ರಾತ್ರಿ 8ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ. ಸೆ.6ರಂದು ರಾತ್ರಿ 10.15ಕ್ಕೆ ಯಶವಂತಪುರದಿಂದ ಹೊರಡುವ ರೈಲು ಸೆ.7ರಂದು ಬೆಳಿಗ್ಗೆ 10.15ಕ್ಕೆ ಬೆಳಗಾವಿ ತಲುಪಲಿದೆ. ಸೆ.8ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಿಗ್ಗೆ 4.30ಕ್ಕೆ ಯಶವಂತಪುರ ತಲುಪಲಿದೆ.

ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ. ರೈಲುಗಳು ಒಟ್ಟು 22 ಬೋಗಿಗಳನ್ನು ಹೊಂದಿರಲಿವೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಸರ್‌ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ (ಎಸ್ಎಂವಿಟಿ) ಸೆ.5 ಮತ್ತು 7ರಂದು ರಾತ್ರಿ 9ಕ್ಕೆ ಹೊರಡುವ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೆ.6 ಮತ್ತು 8ರಂದು ಮಧ್ಯಾಹ್ನ 2.05ಕ್ಕೆ ವಿಜಯಪುರ ತಲುಪಲಿದೆ. ಸೆ.6 ಮತ್ತು 8ರಂದು ವಿಜಯಪುರದಿಂದ ಹೊರಡುವ ರೈಲು ಸೆ.7 ಮತ್ತು 9ರಂದು ಬೆಳಿಗ್ಗೆ 11.15ಕ್ಕೆ ಎಸ್‌ಎಂವಿಟಿ ತಲುಪಲಿದೆ.

ಈ ರೈಲುಗಳು ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿವೆ. ಈ ರೈಲುಗಳು ಒಟ್ಟು 18 ಬೋಗಿಗಳನ್ನು ಒಳಗೊಂಡಿರುತ್ತವೆ.

ಮುಂಗಡ ಬುಕ್ಕಿಂಗ್‌ ಮತ್ತು ವೇಳಾಪಟ್ಟಿ ಮಾಹಿತಿಗಾಗಿ www.enquiry.indianrail.gov.in ಜಾಲತಾಣಕ್ಕೆ ಭೇಟಿ ನೀಡಬಹುದು.  ಅಥವಾ 139ಕ್ಕೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.

ತಾತ್ಕಾಲಿಕ ನಿಲುಗಡೆ: ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್‌ ರೈಲಿಗೆ ಪ್ರಾಯೋಗಿಕ ಆಧಾರದ ಮೇಲೆ ಮಲ್ಲೇಶ್ವರ ನಿಲ್ದಾಣದಲ್ಲಿ ಮೂರು ತಿಂಗಳು ಅಂದರೆ ಅಕ್ಟೋಬರ್ 22ರಿಂದ ಜನವರಿ 21ರವರೆಗೆ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

ಈ ರೈಲು ಮಲ್ಲೇಶ್ವರ ನಿಲ್ದಾಣಕ್ಕೆ ಬೆಳಿಗ್ಗೆ 4.34ಕ್ಕೆ ಬಂದು, ನಿರ್ಗಮಿಸಲಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT