ವರ್ಷದ ಮೊದಲ ಹಬ್ಬ ಸಂಕ್ರಾಂತಿಗೆ ಇನ್ನೊಂದು ವಾರ ಉಳಿದಿದೆ. ಅದೇ ರೀತಿ ಗಣರಾಜ್ಯೋತ್ಸವವೂ ಸನ್ನಿಹಿತವಾಗಿದೆ. ಹೀಗಾಗಿ ಬೆಂಗಳೂರಿನಿಂದ ಬೇರೆ ಬೇರೆ ಊರುಗಳಿಗೆ ತೆರಳುವವರಿಗೆ ಅನುಕೂಲವಾಗಲು ವಿಶೇಷ ರೈಲುಗಳು ಸಂಚರಿಸುತ್ತಿವೆ. ನೈರುತ್ಯ ರೈಲ್ವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ಸದ್ಯ ಎರಡು ಮಾರ್ಗದಲ್ಲಿ ಸಂಕ್ರಾಂತಿ ಹಾಗೂ ಗಣರಾಜ್ಯೋತ್ಸವದ ಪ್ರಯುಕ್ತ, ವಿಶೇಷ ರೈಲು ಸಂಚರಿಸಲಿವೆ. ಹಾಗಾದರೆ ಆ ಎರಡು ಮಾರ್ಗ ಯಾವುವು, ಯಾವ ಸಮಯಕ್ಕೆ ರೈಲುಗಳು ಓಡಾಡಲಿವೆ ಎಂಬುದನ್ನು ತಿಳಿಯೋಣ.
.ಸಂಕ್ರಾಂತಿ: ಯಶವಂತಪುರ – ತಾಳಗುಪ್ಪ ವಿಶೇಷ ರೈಲು.
ಮುಖ್ಯವಾಗಿ ಈ ವಿಶೇಷ ರೈಲುಗಳು ಬೆಂಗಳೂರಿನಿಂದ ಆರಂಭವಾಗುತ್ತವೆ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರವನ್ನು ರೈಲ್ವೆ ಇಲಾಖೆ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯಶವಂತಪುರ– ತಾಳಗುಪ್ಪ

ಜ.13 ಮತ್ತು ಜ.23ರಂದು ರಾತ್ರಿ 10.45ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 4.45ಕ್ಕೆ ತಾಳಗುಪ್ಪ ತಲುಪಲಿದೆ.

ಜ.14 ಮತ್ತು 24ರಂದು ಬೆಳಿಗ್ಗೆ 10ಕ್ಕೆ ತಾಳಗುಪ್ಪದಿಂದ ಹೊರಟು ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ.

ರೈಲು ಸಂಚಾರಿಸುವ ಮಾರ್ಗ

ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ವಿಶೇಷ ರೈಲುಗಳು ನಿಲುಗಡೆ ಹೊಂದಿವೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು–ವಿಜಯಪುರ

ಈ ಮಾರ್ಗದಲ್ಲಿ ಪ್ರಮುಖವಾಗಿ ಸಂಕ್ರಾಂತಿ ಹಾಗೂ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಜನದಟ್ಟಣೆಯನ್ನು ನಿಯಂತ್ರಿಸಲು ಎಸ್ಎಂವಿಟಿ ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ.

ಜನವರಿ 13 ಮತ್ತು 23ರಂದು ರಾತ್ರಿ 7.15ಕ್ಕೆ ಎಸ್ಎಂವಿಟಿಯಿಂದ ಹೊರಡುವ ರೈಲು ಮರುದಿನ ಬೆಳಿಗ್ಗೆ 7ಕ್ಕೆ ವಿಜಯಪುರ ತಲುಪಲಿದೆ.

ವಿಜಯಪುರದಿಂದ ಜ.18 ಮತ್ತು 26ರಂದು ಸಂಜೆ 5.30ಕ್ಕೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 6.30ಕ್ಕೆ ಎಸ್ಎಂವಿಟಿಗೆ ತಲುಪಲಿದೆ.

ರೈಲು ಸಂಚರಿಸುವ ಮಾರ್ಗ

ಬಾಣಸವಾಡಿ, ತುಮಕೂರು, ಅರಸಿಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.