ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿ ಕರ್ತವ್ಯ ಲೋಪ ಎಸಗಿದ ಆರೋಪದ ಅಡಿ 7 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಶರಣಪ್ಪ, ಎಲ್.ಎಸ್.ತಿಪ್ಪೇಸ್ವಾಮಿ, ಬಸಪ್ಪ ತೇಲಿ, ಪ್ರಭು ಖಂಡೇವಾಲ, ವೆಂಕಪ್ಪ, ಸಂಪತ್ ಕುಮಾರ್, ಎಲ್.ಎಸ್. ತಿಪ್ಪೇಸ್ವಾಮಿ ಅಮಾನತುಗೊಂಡವರು.
ಗೃಹ ಸಚಿವ ಜಿ.ಪರಮೇಶ್ವರ ಮಾತನಾಡಿ, ಅಧಿಕಾರಿಗಳ ಪಾತ್ರ ಇದ್ದರೆ ಅವರನ್ನೂ ಅಮಾನತು ಮಾಡಿ ಕ್ರಮ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆ ನಡೆಯುತ್ತಿದೆ. ಕೆಲವು ಸಿಬ್ಬಂದಿ ವರ್ಗಾವಣೆಗೂ ಆದೇಶಿಸಲಾಗಿದೆ ಎಂದು ಹೇಳಿದರು.