ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಲೆ ಆರೋಪಿ ದರ್ಶನ್‌ಗೆ ವಿಶೇಷ ಆತಿಥ್ಯ: ಫೋಟೊ ಬಹಿರಂಗವಾಗಿದ್ದು ಹೇಗೆ?

Published 26 ಆಗಸ್ಟ್ 2024, 6:18 IST
Last Updated 26 ಆಗಸ್ಟ್ 2024, 6:18 IST
ಅಕ್ಷರ ಗಾತ್ರ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಕೊಲೆ ಆರೋಪಿ ದರ್ಶನ್ ಕುರ್ಚಿ ಮೇಲೆ ಕುಳಿತು ಸಿಗರೇಟ್ ಸೇದುತ್ತಾ ವಿಲ್ಸನ್ ಗಾರ್ಡನ್ ನಾಗನ ಜೊತೆಗೆ ಹರಟೆ ಹೊಡೆಯುತ್ತಿರುವ ಫೋಟೊ ಬಹಿರಂಗವಾಗಿದ್ದಾದರೂ ಹೇಗೆ ಎಂಬ ಪ್ರಶ್ನೆ ಜೈಲಿನ ಸಿಬ್ಬಂದಿಯನ್ನು ಕಾಡುತ್ತಿದೆ.

ದರ್ಶನ್, ನಾಗ, ಕುಳ್ಳ ಸೀನ ಹಾಗೂ ದರ್ಶನ್ ಮ್ಯಾನೇಜರ್ ನಾಗರಾಜ್ ಕುಳಿತಿದ್ದ ಫೋಟೊವನ್ನು ರೌಡಿ ವೇಲು ಎಂಬಾತ ತೆಗೆದಿದ್ದ. ಅದನ್ನು ತನ್ನ ಪತ್ನಿಗೆ ಕಳುಹಿಸಿದ್ದ. ಆಕೆ ತಮ್ಮ ಸ್ನೇಹಿತರಿಗೆ ಕಳುಹಿಸಿದ್ದರು. ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಹೀಗೆ ಫೋಟೊ ಬಹಿರಂಗವಾಗಿದೆ ಎಂದು ಮೂಲಗಳು ಹೇಳಿವೆ.

ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿ ಕರ್ತವ್ಯ ಲೋಪ ಎಸಗಿದ ಆರೋಪದ ಅಡಿ 7 ಸಿಬ್ಬಂದಿಯನ್ನು ಸದ್ಯ ಅಮಾನತು ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT