ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 5ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವೆ ಮೊದಲ ಪಂದ್ಯ ನಡೆಯಲಿದೆ. ಭಾರತದ ಅಭಿಯಾನವು ಅಕ್ಟೋಬರ್ 8ರಂದು ಆರಂಭವಾಗಲಿದ್ದು, ಚೆನ್ನೈನ ಎಂ.ಎ ಚಿದಂಬರಂ ಮೈದಾನದಲ್ಲಿ ಆಸ್ಟ್ರೇಲಿಯಾದ ವಿರುದ್ಧ ಮೊದಲ ಪಂದ್ಯ ಆಡಲಿದೆ.
ಈ ಬಾರಿ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತವೂ ಒಂದಾಗಿದ್ದು, ಅದಕ್ಕಾಗಿ ತಂಡದ ಆಟಗಾರರು ಉತ್ತಮ ಸಿದ್ಧತೆಯನ್ನೂ ನಡೆಸುತ್ತಿದ್ದಾರೆ. ಮೂರನೇ ಬಾರಿಗೆ ಭಾರತ ಏಕದಿನ ವಿಶ್ವಕಪ್ ಎತ್ತಿಹಿಡಿಯುವುದನ್ನು ಕಾಣಲು ಅಭಿಮಾನಿಗಳು ಕೂಡ ಕಾತುರದಿಂದ ಕಾಯುತ್ತಿದ್ದಾರೆ. ಉತ್ತಮ ತಂಡವನ್ನು ಆಯ್ಕೆ ಮಾಡಿದ್ದರೂ ಕೂಡ, ಕೆಲವೊಂದು ಕೊರತೆಗಳು ಹಾಗೂ ದೌರ್ಬಲ್ಯಗಳು ಭಾರತ ತಂಡವನ್ನು ಕಾಡುತ್ತಿದೆ. ಇತ್ತೀಚಿನ ಪಂದ್ಯಗಳಲ್ಲಿ ಭಾರತ ತಂಡದ ಆಟಗಾರರು ಪದೇ ಪದೇ ಮಾಡಿರುವ ತಪ್ಪುಗಳು ಕೂಡ ವಿಶ್ವಕಪ್‌ನಲ್ಲಿ ದುಬಾರಿಯಾಗಿ ಪರಿಣಮಿಸುವ ಸಾಧ್ಯತೆ ಇದೆ.
ಈ ನಾಲ್ಕು ಕೊರತೆಗಳು ಭಾರತ ತಂಡವನ್ನು ಕಾಡುತ್ತಿದೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.