ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ವತ್‌ ಮೇಲಿನ ಹಲ್ಲೆ ಪ್ರಕರಣ: ‘ಶ್ರೀಕೃಷ್ಣ ಆರ್ಥಿಕ ಅಪರಾಧಗಳಲ್ಲೂ ಬೇಕಿದ್ದಾನೆ’

Last Updated 6 ಸೆಪ್ಟೆಂಬರ್ 2018, 15:27 IST
ಅಕ್ಷರ ಗಾತ್ರ

ಬೆಂಗಳೂರು: ‘ಉದ್ಯಮಿ ಲೋಕನಾಥ್‌ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಮೂರನೇ ಆರೋಪಿ ಶ್ರೀಕೃಷ್ಣ ಆರ್ಥಿಕ ಅಪರಾಧಗಳಲ್ಲೂ ಭಾಗಿಯಾಗಿದ್ದು ಆತನಿಗೆ ನಿರೀಕ್ಷಣಾ ಜಾಮೀನು ನೀಡಬಾರದು’ ಎಂದು ಪ್ರಾಸಿಕ್ಯೂಷನ್‌ ಹೈಕೋರ್ಟ್‌ಗೆ ಪ್ರತಿಪಾದಿಸಿದೆ.

ನಿರೀಕ್ಷಣಾ ಜಾಮೀನು ಕೋರಿ ಶ್ರೀಕೃಷ್ಣ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಶ್ರೀಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಬಿ.ವಿ.ಆಚಾರ್ಯ ಅವರು, ‘ಪ್ರಕರಣದಲ್ಲಿ ಎಲ್ಲ ಆರೋಪಿಗಳಿಗೂ ಜಾಮೀನು ದೊರೆತಿರುವಾಗ ಶ್ರೀಕೃಷ್ಣ ಕೂಡಾ ಜಾಮೀನು ಪಡೆಯಲು ಅರ್ಹ. ಆದ್ದರಿಂದ ನಿರೀಕ್ಷಣಾ ಜಾಮೀನು ನೀಡಬೇಕು’ ಎಂದು ಕೋರಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಎಂ.ಎಸ್. ಶ್ಯಾಮಸುಂದರ್, ‘ಆರೋಪಿ ಈ ಪ್ರಕರಣ ಮಾತ್ರವಲ್ಲದೇ ಆರ್ಥಿಕ ಅಪರಾಧಗಳಲ್ಲೂ ಪೊಲಿಸರಿಗೆ ಬೇಕಿರುವ ವ್ಯಕ್ತಿಯಾಗಿದ್ದಾನೆ. ಒಂದು ವೇಳೆ ಆತ ಈ ಪ್ರಕರಣದಲ್ಲಿ ತಪ್ಪು ಮಾಡಿಲ್ಲ ಎಂದಾದರೆ ಪೊಲೀಸರಿಗೆ ಶರಣಾಗಲು ಏಕೆ ಭಯ’ ಎಂದು ಪ್ರಶ್ನಿಸಿದರು.

ವಾದ - ಪ್ರತಿವಾದ ಆಲಿಸಿದ ನ್ಯಾಯಪೀಠ ಅರ್ಜಿ ಮೇಲಿನ ಆದೇಶವನ್ನು ಕಾಯ್ದಿರಿಸಿದೆ.

2018ರ ಫೆಬ್ರುವರಿ 17ರಂದು ರಾತ್ರಿ ಮೊಹಮದ್ ನಲಪಾಡ್ ಮತ್ತು ಅವರ ಸಹಚರರು ನಗರದ ಫರ್ಜಿ ಕಫೆಯಲ್ಲಿ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಶ್ರೀಕೃಷ್ಣ ತಲೆ ಮರೆಸಿಕೊಂಡಿರುವ ಆರೋಪಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT