ಶೃಂಗೇರಿ: ‘ಕ್ಷೇತ್ರದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಡಿ.ಎನ್. ಜೀವರಾಜ್ ಅವರ ವಿರುದ್ಧ ತೇಜೋವಧೆ ಮಾಡುತ್ತಿರುವ ಕಾಂಗ್ರೆಸ್ನ ಶಾಸಕ ಟಿ.ಡಿ ರಾಜೇಗೌಡ ಮತ್ತು ಅವರ ಹಿಂಬಾಲಕರ ನಡೆಯನ್ನು ಬಿಜೆಪಿ ಖಂಡಿಸುತ್ತದೆ’ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ತಲಗಾರು ಉಮೇಶ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘15 ದಿನಗಳಿಂದ ಶೃಂಗೇರಿ ಕ್ಷೇತ್ರದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳಲ್ಲಿ ಕಾಂಗ್ರೆಸ್ನ ರಾಜ್ಯ ಘಟಕದ ವಕ್ತಾರರು ಮತ್ತು ಮುಖಂಡರು ಬಿಜೆಪಿ ಅಭ್ಯರ್ಥಿ ಜೀವರಾಜ್ ವಿರುದ್ಧ ಸುಳ್ಳಿನ ಸರಮಾಲೆಯನ್ನೆ ಹೇಳಿ ಆರೋಪ ಮಾಡುತ್ತಿದ್ದಾರೆ. ಕ್ಷೇತ್ರದ ಜನರು ಇದನ್ನು ನಂಬಬಾರದು. ಇದೇ ರೀತಿ ಕಾಂಗ್ರೆಸ್ ಮುಖಂಡರ ಸುಳ್ಳಿನ ಹೇಳಿಕೆಗಳು ಮುಂದುವರೆದಲ್ಲಿ ಬಿಜೆಪಿ ಇದಕ್ಕೆ ತಕ್ಕ ಉತ್ತರ ನೀಡಲಿದೆ’ ಎಂದರು.

ಬಿಜೆಪಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ನೂತನ್ ಕುಮಾರ್ ಮಾತನಾಡಿ, ‘ಕ್ಷೇತ್ರದಾದ್ಯಂತ ಕಾಂಗ್ರೆಸ್ನವರು ಬಿಜೆಪಿ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಕೇಸ್ ದಾಖಲಿಸುತ್ತಿದ್ದಾರೆ. ಇದನ್ನು ಬಿಟ್ಟು ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಕೊಡಬೇಕು. ಸುಪ್ರೀಂ ಕೋರ್ಟ್ ನೀಡಿರುವುದು ಮಧ್ಯಂತರ ಆದೇಶ, ಮುಂದೆ ತೀರ್ಪು ನಮ್ಮ ಪರವಾಗಿ ಬರಲಿದ್ದು ಜೀವರಾಜ್ ಮತ್ತೆ ಶಾಸಕರಾಗುವ ಆಶಾಭಾವನೆ ನಮಗಿದೆ. ಸದ್ಯ ರಾಜೇಗೌಡರು ಅಭಿವೃದ್ಧಿ ಕಡೆ ಗಮನ ನೀಡಲಿ’ ಎಂದರು.

ಬಿಜೆಪಿ ಮುಖಂಡರಾದ ಬೇಗಾನೆ ಪ್ರಸನ್ನ, ಕಚ್ಚೋಡಿ ರಮೇಶ್, ನಾಗೇಶ್ ಕಾಮತ್, ತಿಪ್ಪನಮಕ್ಕಿ ವಿಜಯ್, ರಾಘವೇಂದ್ರ ಹಂಚಲಿ, ಅಂಗುರ್ಡಿ ದಿನೇಶ್, ಸುಂದರೇಶ್, ವೆಂಕಟೇಶ್, ಹೆಬ್ಬಿಗೆ ಕೃಷ್ಣಮೂರ್ತಿ, ಬಿ.ವಿ. ಪ್ರವೀಣ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-126-180129423

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.