ಬೆಂಗಳೂರು: ನೆಲಮಂಗಲ ತಾಲ್ಲೂಕು ಡಾಬಸ್ಪೇಟೆ ಸಮೀಪದಲ್ಲಿರುವ ಶೃಂಗೇರಿ ಶಿವಗಂಗಾ ಮಠದ ಪುರುಷೋತ್ತಮ ಭಾರತೀ ಸ್ವಾಮೀಜಿ(73) ಅವರು ಶುಕ್ರವಾರ ನಿಧನರಾಗಿದ್ದಾರೆ.

ದೀಪಾವಳಿ ಹಬ್ಬದ ದಿನದಂದೇ ತೀವ್ರ ಅಸ್ವಸ್ಥರಾಗಿದ್ದ ಸ್ವಾಮೀಜಿ ಅವರಿಗೆ ನೆಲಮಂಗಲದಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಅಲ್ಲಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ನೀಡಲಾಗಿತ್ತು ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದ್ದಾರೂ ಬೆಳಗಿನ ಜಾವ ನಿಧನರಾದರು ಎಂದು ವಕೀಲ ಅಶೋಕ್ ಹಾರನಹಳ್ಳಿ ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ 12ಕ್ಕೆ ಅಂತ್ಯಕ್ರಿಯೆ ಶಿವಗಂಗಾ ಮಠದಲ್ಲಿ ನಡೆಯಲಿದೆ.

ಶಿವಗಂಗಾ ಮಠದ 19ನೇ ಪೀಠಾಧಿಪತಿಗಳಾಗಿದ್ದ ಸ್ವಾಮೀಜಿ ಅವರ ಪೂರ್ವಾಶ್ರಮದ ಹೆಸರು ಕಮ್ಮಂಬಾಟಿ ನಾಗೇಶ್ವರ ಅವಧಾನಿಗಳು.

ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ಜೀಕೊಂಡೂರು ಮಂಡಲಂನ ವೆಲ್ಲಟೂರು ಗ್ರಾಮದಲ್ಲಿ ಕಮ್ಮಂಬಾಟಿ ಸೇತುಮಾಧವ ಅವಧಾನಿ ಮತ್ತು ಕಲ್ಯಾಣಿ ಬಾಲಾ ತ್ರಿಪುರಸುಂದರಮ್ಮ ದಂಪತಿ ದ್ವಿತೀಯ ಪುತ್ರರಾಗಿ 9ನೇ ಸೆಪ್ಟೆಂಬರ್ 1953 ಜನಿಸಿದರು.

ವಿಜಯವಾಡಗಳಲ್ಲಿ ವಿದ್ಯಾಭ್ಯಾಸವನ್ನು ಪೂರೈಸಿದ ನಂತರ ವಿಜಯವಾಡದ ಶೃಂಗೇರಿ ಮಠದಲ್ಲಿ ತಮ್ಮ ತಂದೆಯವರಿಂದಲೇ ವೇದ ಅಭ್ಯಾಸ ಮಾಡಿದರು. ಪಂಚ ಕಾವ್ಯ, ಜೋತಿಷ್ಯ ಶಾಸ್ತ್ರವನ್ನು ಅಧ್ಯಯನ ಮಾಡಿದವರು. ವೇದಿಕ್ ಮ್ಯಾಥ್ಸ್ನಲ್ಲೂ ಪಾರಂಗತರು.

ಮೈಸೂರಿನಲ್ಲಿರುವ ಅವಧೂತ ದತ್ತಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹಾಗೂ ದತ್ತ ವಿಜಯಾನಂದತೀರ್ಥ ಸ್ವಾಮೀಜಿ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು ಪುರುಷೋತ್ತಮ ಭಾರತೀ ಸ್ವಾಮೀಜಿ.

ಶಿವಗಂಗೆಯ 18ನೇ ಪೀಠಾಧಿಪತಿಗಳಾಗಿದ್ದ ಸಚ್ಚಿದಾನಂದ ಭಾರತೀ ಸ್ವಾಮೀಜಿ ನಿಧನರಾದ ನಂತರ 2014ರ ಮಾ.3ರಂದು ಇವರನ್ನು ಪೀಠಾಧಿಪತಿಯಾಗಿ ನೇಮಿಸಲಾಯಿತು. ಏಪ್ರಿಲ್ 24ರಂದು ಪಟ್ಟಾಭಿಷೇಕ ನೆರವೇರಿತ್ತು. 11 ವರ್ಷದಿಂದ ಅವರೇ ಪೀಠಾಧಿಪತಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.