ಶ್ರೀರಂಗಪಟ್ಟಣ: ಪಟ್ಟಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಿ.ಜಿ. ಕುಮಾರ್ ಇಲಾಖೆಯಲ್ಲಿ ವಿಶಿಷ್ಟ ಸಾಧನೆಗಾಗಿ ಗುರುವಾರ ‘ಮುಖ್ಯಮಂತ್ರಿ ಪದಕ’ ಸ್ವೀಕರಿಸಿದರು.

ಬೆಂಗಳೂರಿನ ಕೋರಮಂಗಲದ ಕೆಎಸ್ಆರ್ಪಿ ಗ್ರೌಂಡ್ನಲ್ಲಿ, ಪೊಲೀಸ್ ಧ್ವಜ ದಿನಾಚರಣೆ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಸಮ್ಮುಖದಲ್ಲಿ ಬಿ.ಜಿ. ಕುಮಾರ್ ಅವರಿಗೆ ಪದಕವನ್ನು ಪ್ರದಾನ ಮಾಡಿದರು.

ಬಿ.ಜಿ. ಕುಮಾರ್ ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ಎಂಟು ಕೊಲೆ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯಾಗುವಂತೆ ನೋಡಿಕೊಂಡಿದ್ದರು. ಹತ್ತಕ್ಕೂ ಹೆಚ್ಚು ಕಳ್ಳತನ ಪ್ರಕರಣ, ಅಂತರರಾಜ್ಯ ಕಳ್ಳರ ಬಂಧನ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳನ್ನು ಭೇದಿಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಹುದ್ದೆಯಲ್ಲಿದ್ದಾಗ ಬೆಂಗಳೂರು– ಮೈಸೂರು ಎಕ್ಸ್ಪ್ರೆಸ್ ವೇ ನಲ್ಲಿ ಕಾರು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದ್ದ ವೇಳೆ ಕಾರಿನಲ್ಲಿ ಸಿಲುಕಿದ್ದ ನಾಲ್ವರನ್ನು ಬಿ.ಜಿ. ಕುಮಾರ್ ರಕ್ಷಿಸಿದ್ದರು.

2025ನೇ ಸಾಲಿನ ‘ಡಿಜಿ ಮತ್ತು ಐಜಿಪಿ ಗೌರವ ಪದಕ’ವನ್ನೂ ಇವರು ಪಡೆದಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-40-601017516

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.