ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಫಲಿತಾಂಶ ಕುಸಿತ: ಶಿಕ್ಷಕರ ವಾರ್ಷಿಕ ಬಡ್ತಿಗೆ ತಡೆ

Published 26 ಜೂನ್ 2024, 15:29 IST
Last Updated 26 ಜೂನ್ 2024, 15:29 IST
ಅಕ್ಷರ ಗಾತ್ರ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಅತ್ಯಂತ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿರುವ ಪ್ರೌಢಶಾಲೆಗಳ ಶಿಕ್ಷಕರ ಒಂದು ವಾರ್ಷಿಕ ಬಡ್ತಿಯನ್ನು ತಡೆ ಹಿಡಿಯಲಾಗಿದೆ.

ಈ ಕುರಿತು ಆದೇಶ ಹೊರಡಿಸಿರುವ ಕೆಲ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲೆಯ ವಿಷಯವಾರು ಸರಾಸರಿಗಿಂತ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ ಹಾಗೂ ಅನುದಾನಿತ ಪ್ರೌಢ ಶಾಲೆಗಳ ವಿಷಯವಾರು ಶಿಕ್ಷಕರ ಒಂದು ವಾರ್ಷಿಕ ಬಡ್ತಿಯನ್ನು ತಡೆ ಹಿಡಿಯಬೇಕು. ಕೈಗೊಂಡ ಕ್ರಮದ ವರದಿಯನ್ನು ತಕ್ಷಣ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

2023–24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕಳೆದ ಬಾರಿಗಿಂತ ಶೇಕಡ 10.49ರಷ್ಟು ಕುಸಿತ ಕಂಡಿತ್ತು. ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಲವು ಜಿಲ್ಲೆಗಳು ಸುಧಾರಣೆ ಕಂಡರೆ, 2023ರ ಫಲಿತಾಂಶದಲ್ಲಿ ಅಗ್ರಸ್ಥಾನದಲ್ಲಿದ್ದ ಜಿಲ್ಲೆಗಳು ಈ ಬಾರಿ ಕುಸಿತ ಕಂಡಿವೆ.

ಮೊದಲ ಸ್ಥಾನದಲ್ಲಿದ್ದ ಚಿತ್ರದುರ್ಗ 21ನೇ ಸ್ಥಾನಕ್ಕೆ, ದ್ವಿತೀಯ ಸ್ಥಾನದಲ್ಲಿದ್ದ ಮಂಡ್ಯ 19ಕ್ಕೆ, ಮೂರನೇ ಸ್ಥಾನದಲ್ಲಿದ್ದ ಹಾಸನ ಆರನೇ ಸ್ಥಾನಕ್ಕೆ, ಆರನೇ ಸ್ಥಾನದಲ್ಲಿದ್ದ ಕೋಲಾರ 19ಕ್ಕೆ, 10ರಲ್ಲಿದ್ದ ವಿಜಯನಗರ 27ಕ್ಕೆ, ಏಳರಲ್ಲಿದ್ದ ಚಾಮರಾಜನಗರ 24ನೇ ಸ್ಥಾನಕ್ಕೆ ಕುಸಿದಿದ್ದವು. ಕಳೆದ ಬಾರಿ ಕೊನೆಯ ಸ್ಥಾನದಲ್ಲಿದ್ದ ಯಾದಗಿರಿ ಈ ಬಾರಿಯೂ ಕೊನೆಯ ಸ್ಥಾನ ಪಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT