ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಕಲಿಯುವ ಮಕ್ಕಳಲ್ಲಿ ಶೇ 65ರಿಂದ 70ರಷ್ಟು ವಿದ್ಯಾರ್ಥಿಗಳು ಮಾತ್ರ ಎಸ್ಎಸ್ಎಲ್ಸಿ ಹಂತ ತಲುಪುತ್ತಿದ್ದಾರೆ.

ಗುಲ್ಬರ್ಗಾ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಛಾಯಾ ದೇಗಾಂವಕರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಎಂಟು ಸದಸ್ಯರ ಸಮಿತಿ ಸರ್ಕಾರಕ್ಕೆ ಸಲ್ಲಿಸಿದ ಅಧ್ಯಯನ ವರದಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಇಂತಹ ಹಲವು ಶೈಕ್ಷಣಿಕ ಸ್ಥಿತಿಗತಿಗಳನ್ನು ಉಲ್ಲೇಖಿಸಲಾಗಿದೆ.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ವ್ಯಾಪ್ತಿಯ ಒಟ್ಟು ಶಾಲೆಗಳಲ್ಲಿ ಶೇ 57.35ರಷ್ಟು ಸರ್ಕಾರಿ ಶಾಲೆಗಳಿದ್ದು, 5ರಿಂದ 8ನೇ ತರಗತಿಯ ಮಕ್ಕಳ ಶೈಕ್ಷಣಿಕ ಗುಣಮಟ್ಟ ಶೇ 89 ಇದ್ದರೆ, ನಂತರ ಕಡಿಮೆಯಾಗುತ್ತಾ ಹೋಗಿದೆ. ಶೇ 12 ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಎಸ್ಎಸ್ಎಲ್ಸಿ ಫಲಿತಾಂಶ ಶೇ 53.40 ಇದೆ. ವಿಜಯನಗರ ಜಿಲ್ಲೆ ಹೊರತುಪಡಿಸಿದರೆ ಉಳಿದ ಜಿಲ್ಲೆಗಳು ರಾಜ್ಯ ಸರಾಸರಿಗಿಂತ ಕಡಿಮೆ ಫಲಿತಾಂಶ ಪಡೆಯುತ್ತಿವೆ ಎಂದು ವರದಿ ಹೇಳಿದೆ.

ಶಿಕ್ಷಕರ ಕೊರತೆ, ಕಡಿಮೆ ಮಟ್ಟದ ಬೊಧನಾ ಸಾಮರ್ಥ್ಯ, ಹಲವು ಶಾಲೆಗಳು ಅತಿಥಿ ಶಿಕ್ಷಕರನ್ನೇ ಅವಲಂಬಿಸಿರುವುದು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳ ಪರಿಣಾಮಕಾರಿ ನಿರ್ವಹಣೆಯ ಕೊರತೆ, ಹಿರಿಯ ಅಧಿಕಾರಿಗಳ ಶೈಕ್ಷಣಿಕ ಮಾರ್ಗದರ್ಶನದ ಕೊರತೆ, ಶಾಲಾ ಮೇಲ್ವಿಚಾರಣೆ ಮತ್ತು ಪರಿಶೀಲನೆಯಲ್ಲಿನ ಲೋಪಗಳು ಕಾರಣಗಳಾಗಿದ್ದು, ವಿದ್ಯಾರ್ಥಿಗಳ ಗೈರು ಹಾಜರಿ ಇಡೀ ವ್ಯವಸ್ಥೆಯ ಪ್ರಮುಖ ಸಮಸ್ಯೆ ಎಂದು ವಿವರಿಸಲಾಗಿದೆ.

ಪ್ರಾಥಮಿಕ ಶಾಲೆಗಳಲ್ಲಿ 17,274 ಹುದ್ದೆಗಳು, ಪ್ರೌಢಶಾಲೆಗಳಲ್ಲಿ 4,107 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಇದರಿಂದ ಪ್ರಾಥಮಿಕ ಹಂತದಲ್ಲೇ ಶಿಕ್ಷಣದ ಗುಣಮಟ್ಟ ಕುಸಿದಿದೆ. ತರಬೇತಿ ಪಡೆದ ಶಿಕ್ಷಕರ ಲಭ್ಯತೆ ಖಚಿತಪಡಿಸಲು ಶಿಕ್ಷಕರ ವರ್ಗಾವಣೆ ನೀತಿಯನ್ನು ಪರಿಶೀಲಿಸುವ ಅಗತ್ಯವಿದೆ. ಎಲ್ಲ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲೂ ಆರಂಭಿಕ ಬಾಲ್ಯ ಶಿಕ್ಷಣ (ಇಸಿಇ) ವ್ಯಾಪ್ತಿ ವಿಸ್ತರಿಸಬೇಕು. 1ರಿಂದ 3ನೇ ತರಗತಿಯ ಶಿಕ್ಷಣವನ್ನು ಬಲಗೊಳಿಸಬೇಕು. 4ನೇ ತರಗತಿಯಿಂದ ಮಧ್ಯವರ್ತಿ ಕಲಿಕಾ ವಿಧಾನಗಳನ್ನು ಅಳವಡಿಸಬೇಕು. ಮೂಲಭೂತ ಸಾಕ್ಷರತೆಗೆ ಒತ್ತು ನೀಡಬೇಕು. ಅಗತ್ಯ ಇರುವ ಕಡೆಗಳಲ್ಲಿ ಮಾಧ್ಯಮಿಕ ಶಿಕ್ಷಣವನ್ನು ಪ್ರೌಢಶಾಲೆಗಳಾಗಿ ಮೇಲ್ದರ್ಜೆಗೇರಿಸಬೇಕು. 8ನೇ ತರಗತಿಯಿಂದ ಕಲಿಕೆಯ ತೀವ್ರತೆ ಜತೆಗೆ ವೈಯಕ್ತಿಕ ಬೆಂಬಲ ಒದಗಿಸಬೇಕು. ಶಿಕ್ಷಕರಿಗೆ ಸ್ವಯತ್ತತೆ ನೀಡಬೇಕು. ಡಯಟ್ಗಳು ಸಂಪೂರ್ಣ ಬೆಂಬಲ ನೀಡಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಖಾತರಿ

ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಕಲಿಕಾ ಖಾತರಿ ಖಚಿತಪಡಿಸಬೇಕು. ಹಾಜರಾತಿ ಹೆಚ್ಚಳ ಮತ್ತು ಕಲಿಕಾ ಫಲಿತಾಂಶ ಸಾಧಿಸುವ ಶಾಲೆಗಳಿಗೆ ಪ್ರಶಸ್ತಿ, ಪುರಸ್ಕಾರ ನೀಡಬೇಕು. ಮುಖ್ಯಶಿಕ್ಷಕರು, ಶಿಕ್ಷಕರಿಗೆ ಉತ್ತೇಜನ ನೀಡಬೇಕು. ಕಲಿಕಾ ಖಾತರಿ ಒದಗಿಸುವ ಶಾಲೆಗಳ ಗುಚ್ಛ ಸಿದ್ಧಪಡಿಸಬೇಕು. ಇಂತಹ ಗರಿಷ್ಠ ಶಾಲೆಗಳನ್ನು ಒಳಗೊಂಡ ಜಿಲ್ಲೆಗಳಿಗೆ ವಿಶೇಷ ಪುರಸ್ಕಾರ ನೀಡಬೇಕು ಎದು ಸಮಿತಿ ಶಿಫಾರಸು ಮಾಡಿದೆ. ದ್ವಿಭಾಷಾ ಮಾಧ್ಯಮದ ಶಾಲೆಗಳಿಗೆ ನುರಿತ ಆಂಗ್ಲ ಭಾಷಾ ಜ್ಞಾನ ಹೊಂದಿರುವ ಶಿಕ್ಷಕರನ್ನು ನೇಮಕ ಮಾಡಬೇಕು. ನಲಿಕಲಿ ಕಾರ್ಯಕ್ರಮದಲ್ಲಿ ಸುಧಾರಣೆ ತರಬೇಕು ಎಂದು ವರದಿ ಹೇಳಿದೆ.

ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಶ್ಲಾಘನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳು (ಕೆಪಿಎಸ್) ಮಕ್ಕಳನ್ನು ಆಕರ್ಷಿಸುತ್ತಿದ್ದು, ಶಾಲೆಯಿಂದ ಹೊರಗೆ ಉಳಿಯುವ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡುತ್ತಿವೆ. ಹಾಗಾಗಿ, ಮುಂದಿನ ಐದು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ವತಿಯಿಂದ 200 ಸೇರಿದಂತೆ ಒಟ್ಟು 350 ಕೆಪಿಎಸ್ ಸ್ಥಾಪಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ಶಿಕ್ಷಣದ ಗುಣಮಟ್ಟ ಮತ್ತು ಪರಿಣಾಮಕಾರಿ ಆಡಳಿತಕ್ಕಾಗಿ ಕಲಬುರಗಿ ಆಯುಕ್ತರ ಕಚೇರಿಯಲ್ಲೇ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್ಇಆರ್ಟಿ) ಸ್ಥಾಪಿಸಬೇಕು. ಶಿಕ್ಷಣ ವ್ಯವಸ್ಥೆಯ ಮೂಲ ಸೌಕರ್ಯಗಳಿಗಾಗಿ ಹೆಚ್ಚಿನ ಅನುದಾನ ಒದಗಿಸಬೇಕು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.