ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್‌ 25 ರಿಂದ SSLC ಪರೀಕ್ಷೆ: PUC ಇಂಗ್ಲಿಷ್‌ ಪರೀಕ್ಷೆ ಜೂನ್‌ 18

Last Updated 18 ಮೇ 2020, 19:37 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಲಾಕ್‌ಡೌನ್‌ನಿಂದಾಗಿ ಮುಂದೂಡಲಾಗಿದ್ದಎಸ್ಸೆಸ್ಸೆಲ್ಸಿಪರೀಕ್ಷೆ ಜೂನ್ 25ರಿಂದ ಜುಲೈ 4ರವರೆಗೆ ಹಾಗೂ ದ್ವಿತೀಯ ಪಿಯು ಇಂಗ್ಲಿಷ್‌ ಪರೀಕ್ಷೆ ಜೂನ್‌ 18ರಂದು ನಡೆಯಲಿದೆ.

‘ಎಸ್ಸೆಸ್ಸೆಲ್ಸಿಪರೀಕ್ಷಾ ವೇಳಾಪಟ್ಟಿಯನ್ನು ಒಂದೆರಡು ದಿನಗಳಲ್ಲಿಪ್ರಕಟಿಸಲಾಗುವುದು. ಇಂಗ್ಲಿಷ್‌, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ ಒಂದೊಂದು ದಿನ ಅಂತರ ಇರುವ ಹಾಗೆ ನೋಡಿಕೊಂಡು ಪರೀಕ್ಷೆ ನಡೆಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.‌‌

‘8,48,196 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.2,879 ಪರೀಕ್ಷಾಕೇಂದ್ರಗಳಲ್ಲಿ 43,720 ಕೊಠಡಿಗಳನ್ನು ಬಳಸಲಾಗುತ್ತಿದೆ.ಪ್ರತಿ ಕೊಠಡಿಯಲ್ಲಿ ಅಗತ್ಯ ಅಂತರ ಕಾಯ್ದುಕೊಂಡು ಆಸನದ ವ್ಯವಸ್ಥೆ ಮಾಡಲಾಗುವುದು. ಜ್ವರದ ಲಕ್ಷಣ ಇರುವವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗುವುದು’ ಎಂದರು.

ಇರುವಲ್ಲಿಯೇ ಪರೀಕ್ಷೆ: ‘ವಲಸೆ ಕಾರ್ಮಿಕರ ಮಕ್ಕಳು ತಮ್ಮ ಊರುಗಳಿಗೆ ತೆರಳಿರುವ ಸಾಧ್ಯತೆ ಇದೆ. ದ್ವಿತೀಯ ಪಿಯು ಇಂಗ್ಲಿಷ್‌ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಸಲುವಾಗಿ ಅವರು ಮತ್ತೆ ತಾವು ಈ ಹಿಂದೆ ಇದ್ದಲ್ಲಿಗೆ ಬರುವುದು ಕಷ್ಟವಾಗಬಹುದು. ಹೀಗಾಗಿ ಅವರು ಇದ್ದಲ್ಲಿಯೇ ಪರೀಕ್ಷೆ ನಡೆಸಲು ಅವರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇದೇ 25ರೊಳಗೆ ಮಾಹಿತಿ ಸಂಗ್ರಹ ಕಾರ್ಯ ಪೂರ್ಣಗೊಳ್ಳಲಿದೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಿಗೆ ಸೇರಿದ ವಸತಿ ನಿಲಯಗಳು ಕ್ವಾರಂಟೈನ್‌ ಆಗಿ ಬದಲಾಗಿರುವ ಕಾರಣ ಅಲ್ಲಿನ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಿದ್ದಾರೆ. ಅವರಿಗೆ ಸಹ ಅವರು ಇರುವ ಊರಿನ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು’ ಎಂದು ಸಚಿವರು ವಿವರಿಸಿದರು.‌

2 ಪ್ರತಿ ಮುಖಗವಸು: ‘ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವವರಿಗಾಗಿ ಭಾರತ್‌ ಸ್ಕೌಟ್ಸ್‌, ರಾಮಕೃಷ್ಣ ಮಿಷನ್‌ ಸಹಿತ ಹಲವು ಸಂಘ ಸಂಸ್ಥೆಗಳು ಮುಖಗವಸು ಸಿದ್ಧಪಡಿಸುತ್ತಿದ್ದು, ಕನಿಷ್ಠ ಎರಡು ಮುಖಗವಸು ನೀಡುವ ಗುರಿ ಇದೆ. ಎಲ್ಲಾ ಕೇಂದ್ರಗಳಲ್ಲಿ ಸ್ಯಾನಿಟೈಸರ್‌ ಬಳಸಲಾಗುವುದು. ಎಂಬೆಸಿ ಗ್ರೂಪ್‌ನವರು ಸ್ಯಾನಿಟೈಸರ್‌ ಒದಗಿಸಲಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT