ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅರ್ಧವಾರ್ಷಿಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೂ ‘ಬೋರ್ಡ್‌’ ಪ್ರಶ್ನೆಪತ್ರಿಕೆ

Published : 5 ಸೆಪ್ಟೆಂಬರ್ 2024, 16:11 IST
Last Updated : 5 ಸೆಪ್ಟೆಂಬರ್ 2024, 16:11 IST
ಫಾಲೋ ಮಾಡಿ
Comments

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಅರ್ಧವಾರ್ಷಿಕ ಪರೀಕ್ಷೆಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯೇ ಏಕರೂಪದ ಪ್ರಶ್ನೆಪತ್ರಿಕೆಗಳನ್ನು ಪೂರೈಸಲಿದೆ.

ಮಂಡಳಿಯೇ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ, ಪರೀಕ್ಷೆಯ ಒಂದು ದಿನ ಮೊದಲು ಆಯಾ ಶಾಲೆಗಳ ಮುಖ್ಯ ಶಿಕ್ಷಕರ ಇ–ಮೇಲ್‌ಗೆ (ಶಾಲಾ ಲಾಗಿನ್‌) ಕಳುಹಿಸಲಿದೆ. ಡೌನ್‌ಲೋಡ್‌ ಮಾಡಿಕೊಂಡು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ನಕಲುಪ್ರತಿಗಳನ್ನು ತೆಗೆದುಕೊಳ್ಳಬೇಕು. ಪರೀಕ್ಷಾ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳಿಗೆ ನೀಡಬೇಕು. ಈ ಎಲ್ಲ ಹೊಣೆಗಾರಿಕೆಯನ್ನು ಮುಖ್ಯಶಿಕ್ಷಕರು ನಿಭಾಯಿಸಬೇಕು ಎಂದು ಸೂಚಿಸಲಾಗಿದೆ.

ಪ್ರತಿ ವಿಷಯದಲ್ಲಿ ಐದು ಮಾದರಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಲಾಗುತ್ತದೆ. ಎಲ್ಲ ಮಾದರಿ ಪ್ರಶ್ನೆಪತ್ರಿಕೆಗಳೂ ಮಂಡಳಿಯ ವೆಬ್‌ಸೈಟ್‌ನ ಲಭ್ಯವಿರುತ್ತವೆ. ಅರ್ಧವಾರ್ಷಿಕ ಪರೀಕ್ಷೆ ಜೊತೆಗೆ ಎರಡು ಪೂರ್ವ ಸಿದ್ಧತಾ ಪರೀಕ್ಷೆಗಳಿಗೂ ಮಂಡಳಿಯೇ ಪ್ರಶ್ನೆಪತ್ರಿಕೆಗಳನ್ನು ಪೂರೈಸಲಿದೆ. ಘಟಕ ಪರೀಕ್ಷೆಗಳಿಗೆ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಹೊಣೆಗಾರಿಕೆಯನ್ನು ಆಯಾ ಜಿಲ್ಲೆಗಳ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳಿಗೆ ನೀಡಲಾಗಿದೆ.

ಪೋಷಕರಿಗೆ ಬರಲಿವೆ ಎಚ್ಚರಿಸುವ ಕರೆ:  

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಮನೆಗೆ ಹೋದ ನಂತರ ಅವರ ನಿತ್ಯದ ಅಭ್ಯಾಸದ ಮೇಲೆ ನಿಗಾವಹಿಸಲು ಶಿಕ್ಷಣ ಇಲಾಖೆ ಸೂಚಿಸಿದ್ದು, ಆಯಾ ಶಾಲೆಗಳ ಶಿಕ್ಷಕರು ಬೆಳಿಗ್ಗೆ ಮತ್ತು ಸಂಜೆ ವಿದ್ಯಾರ್ಥಿಗಳ ಪೋಷಕರ ಮೊಬೈಲ್‌ಗೆ ಕರೆ ಮಾಡಿ ಮಾಹಿತಿ ಪಡೆಯಲಿದ್ದಾರೆ. ಅಭ್ಯಾಸದಲ್ಲಿ ನಿರತರಾಗಿರುವುದನ್ನು ಖಚಿತಪಡಿಸಿಕೊಳ್ಳಲಿದ್ದಾರೆ. ವಿದ್ಯಾರ್ಥಿಗಳು ಶಾಲೆಗಳಿಗೆ ಮೂರು ದಿನಕ್ಕಿಂತ ಹೆಚ್ಚು ಗೈರುಹಾಜರಾದರೆ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಅವರ ಮನೆಗೆ ಭೇಟಿ ನೀಡಲು ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT