ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಇಂಗ್ಲಿಷ್ ಪ್ರಶ್ನೆ ಪತ್ರಿಕೆಗಳನ್ನು ಕಿಡಿಗೇಡಿಗಳು ಹರಿಬಿಟ್ಟಿದ್ದು, ಇದು ಸಕಲಿ ಪ್ರಶ್ನೆ ಪತ್ರಿಕೆ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಲು ತಾವು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪೋಷಕರು ಇಂತಹ ಸುದ್ದಿಗಳಿಗೆ ಕಿವಿ ಕೊಡಬೇಡಬಾರದೆಂದು ಮನವಿ ಮಾಡಿರುವ ಸಚಿವರು, ವಿದ್ಯಾರ್ಥಿಗಳು ಸ್ಥೈರ್ಯದಿಂದ ಪರೀಕ್ಷೆ ಬರೆಯಬೇಕೆಂದು ಹೇಳಿದ್ದಾರೆ. ಮಾಧ್ಯಮಗಳು ಇಂತಹ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಹರಡದಿರಲು ಮನವಿ ಮಾಡಿದ್ದಾರೆ.