ಬೆಂಗಳೂರು: ರಾಜ್ಯದಲ್ಲಿ ಶನಿವಾರ ನಡೆದ ಎಸ್‌ಎಸ್‌ಎಲ್‌ಸಿ ವಿಜ್ಞಾನ ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳಿಗೆ ಸಹಕರಿಸಿದ ಆರೋಪದಡಿ ಇಬ್ಬರು ಶಿಕ್ಷಕರನ್ನು ಅಮಾನತು ಹಾಗೂ ನಕಲು ಮಾಡುತ್ತಿದ್ದ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲ್ಲೂಕು ಪರಶುರಾಂಪುರದ ಕರ್ನಾಟಕ ಪಬ್ಲಿಕ್ ಶಾಲೆಯ ಕೇಂದ್ರದಲ್ಲಿ ನಕಲು ಮಾಡಲು ವಿದ್ಯಾರ್ಥಿಗಳಿಗೆ ಸಹಕರಿಸಿದ ಚಳ್ಳಕೆರೆ ತಾಲ್ಲೂಕಿನ ಪಿ.ಓಬನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರಶೇಖರ ಹಾಗೂ ಕೊರ್ಲಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಪ್ರಕಾಶ್ ಅಮಾನತುಗೊಂಡವರು.

ಇದೇ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯಲೋಪ ಎಸಗಿದ ಚಳ್ಳಕೆರೆಯ ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರೇವಣ್ಣ ಹಾಗೂ ಗೋಸಿಕೆರೆ ರಾಧಾಕೃಷ್ಣ ಗ್ರಾಮಾಂತರ ಪ್ರೌಢಶಾಲೆಯ ಶಿಕ್ಷಕ ರಾಘವೇಂದ್ರ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಬಾಗಲಕೋಟೆ ಜಿಲ್ಲೆ ಬೀಳಿಗಿ ಖಾಸಗಿ ಶಾಲೆಯ ಕೇಂದ್ರದಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ ವಿದ್ಯಾರ್ಥಿಗಳಲ್ಲಿ ಶೇ 98.2 ವಿದ್ಯಾರ್ಥಿಗಳು ವಿಜ್ಞಾನ ವಿಷಯದ ಪರೀಕ್ಷೆ ಬರೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.