ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-3ರ ಪರೀಕ್ಷೆ ಆಗಸ್ಟ್ 26 ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಣೆಯಲ್ಲಿ ತಿಳಿಸಿದೆ.
ಮಧ್ಯಾಹ್ನ 12 ಗಂಟೆ ಬಳಿಕ https://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಇದೇ ತಿಂಗಳ 2 ರಿಂದ 9ರವರೆಗೆ ಪರೀಕ್ಷೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.