ಬೆಂಗಳೂರು: ಜೂನ್ 21 ರಿಂದ ನಿಗದಿಯಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

‘ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದೆ. ವಿದ್ಯಾರ್ಥಿಗಳು, ಪೋಷಕರು ಹಾಗೂ ವಿವಿಧ ಶಾಲಾ ಸಂಘಟನೆಗಳ ಆತಂಕವನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ’ ಎಂದೂ ಅವರು ಹೇಳಿದ್ದಾರೆ.

‘ಕೋವಿಡ್ ಎರಡನೇ ಅಲೆಯ ಹರಡುವಿಕೆ ಸಂಪೂರ್ಣ ನಿಯಂತ್ರಣಕ್ಕೆ ಬಂದ ಬಳಿಕ, ಸಾಕಷ್ಟು ದಿನಗಳ ಮೊದದಲೇ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಲಾಗುವುದು’ ಎಂದೂ ಅವರು ತಿಳಿಸಿದ್ದಾರೆ.

’ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು. ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ’ ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.