ಸೊರಬ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಗ್ರೇಡ್ ಬದಲು ಅಂಕ ನೀಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದ್ದು, ಕೋರ್ಟ್ ಆದೇಶದಂತೆ ಅಂಕ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಪಟ್ಟಣದಲ್ಲಿರುವ ಬಂಗಾರಧಾಮದಲ್ಲಿ ಬುಧವಾರ ತಮ್ಮ ತಾಯಿ ಶಕುಂತಲಾ ಬಂಗಾರಪ್ಪ ಅವರ ಪುಣ್ಯಸ್ಮರಣೆ ಅಂಗವಾಗಿ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಬಾರಿ ಹಿಂದಿ ವಿಷಯಕ್ಕೆ ಅಂಕಗಳನ್ನು ನೀಡಲಾಗುವುದು. ಮುಂದಿನ ವರ್ಷ ಗ್ರೇಡ್ ನೀಡುವ ಕುರಿತು ಸರ್ಕಾರ ನಿರ್ಧರಿಸಲಿದೆ ಎಂದರು.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತಿಯ ಭಾಷೆಯಾದ ಹಿಂದಿ ಕಡ್ಡಾಯವಲ್ಲ ಎಂಬ ತೀರ್ಮಾನವನ್ನು ಸರ್ಕಾರ ಕೈಗೊಂಡಿತ್ತು. ಸರ್ಕಾರ ಹಿಂದಿ ವಿರೋಧಿಯಲ್ಲ. ಬದಲಾಗಿ ಕನ್ನಡವನ್ನು ಉಳಿಸುವ ಕೆಲಸ ಮಾಡುತ್ತಿದೆ. ಕನ್ನಡದ ಪರವಾಗಿ ನಿಲ್ಲಲು ಸರ್ಕಾರ ಈ ತೀರ್ಮಾನ ಕೈಗೊಂಡಿತ್ತು. ಆದರೆ ಹೈಕೋರ್ಟ್ ಆದೇಶವನ್ನು ಸರ್ಕಾರ ಸ್ವಾಗತಿಸುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.