ಬೆಂಗಳೂರು: ಎಸ್ಎಸ್ಎಲ್ಸಿ, ದ್ವಿತೀಯ ಪಿಯು ಪರೀಕ್ಷೆಗಳನ್ನು ಖಾಸಗಿಯಾಗಿ ತೆಗೆದುಕೊಳ್ಳುವ, ಪುನರಾವರ್ತಿತ ವಿದ್ಯಾರ್ಥಿಗಳು ನೋಂದಣಿಗಾಗಿ ಕಾಲೇಜುಗಳಿಗೆ ಅಲೆಯುವ ಅಗತ್ಯವಿಲ್ಲ. ಇನ್ನು ಮುಂದೆ ಮೊಬೈಲ್ ಮೂಲಕ ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಳ್ಳಬಹುದು.

ಶಾಲಾ ಶಿಕ್ಷಣ ಇಲಾಖೆ ಸೂಚನೆಯಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೊಸ ನಿಯಮ ರೂಪಿಸಿದೆ. 2025–26ನೇ ಸಾಲಿನ ಪರೀಕ್ಷೆಗಳಿಂದಲೇ ಈ ನಿಯಮ ಅನ್ವಯವಾಗಲಿದೆ. ವಿದ್ಯಾರ್ಥಿಗಳು ಶುಲ್ಕವನ್ನೂ ಆನ್ಲೈನ್ ಮೂಲಕವೇ ಪಾವತಿ ಮಾಡಬಹುದು.

ನಿಗದಿತ ವಯೋಮಿತಿಯ ಆಧಾರದಲ್ಲಿ ಖಾಸಗಿಯಾಗಿ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳು ಇದುವರೆಗೂ ತಮಗೆ ಅನುಕೂಲಕರ ಎನಿಸುವ ಪ್ರೌಢಶಾಲೆ (ಎಸ್ಎಸ್ಎಲ್ಸಿ), ಪದವಿಪೂರ್ವ ಕಾಲೇಜುಗಳಿಗೆ (ದ್ವಿತೀಯ ಪಿಯು) ತೆರಳಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಳ್ಳಬೇಕಿತ್ತು. ಅಲ್ಲೇ ಶುಲ್ಕ ಪಾವತಿಸಬೇಕಿತ್ತು. ಸಂಗ್ರಹಿಸಿದ ಶುಲ್ಕವನ್ನು ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಸರ್ಕಾರದ ಖಜಾನೆಗೆ ಜಮೆ ಮಾಡುತ್ತಿದ್ದರು.

ವಿದ್ಯಾರ್ಥಿಗಳು ಶಾಲಾ–ಕಾಲೇಜುಗಳಿಗೆ ತೆರಳಿದಾಗ ಮುಖ್ಯಸ್ಥರು ಇಲ್ಲದಿರುವ ಘಟನೆಗಳು, ಅಧಿಕ ಶುಲ್ಕ ಪಡೆದ ಪ್ರಕರಣಗಳು ಹಾಗೂ ಸುಮ್ಮನೆ ಅಲೆದಾಡಿಸುತ್ತಾರೆ ಎಂಬ ಸಾಕಷ್ಟು ದೂರುಗಳು ಸಲ್ಲಿಕೆಯಾಗಿದ್ದವು. ಕೆಲವು ಬಾರಿ ಸಂಗ್ರಹಿಸಿದ ಶುಲ್ಕ ನಿಗದಿತ ಗಡುವಿನ ಒಳಗೆ ಖಜಾನೆಗೆ ಜಮೆಯಾಗದೆ ಕೆಲವು ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರಗಳೇ ಸಿಗುತ್ತಿರಲಿಲ್ಲ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರವಾಗಿ ಪರೀಕ್ಷಾ ಮಂಡಳಿ ಆನ್ಲೈನ್ ಪರೀಕ್ಷಾ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರುತ್ತಿದೆ.

‘ಪ್ರತಿವರ್ಷ ಕನಿಷ್ಠ 90 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ, ದ್ವಿತೀಯ ಪಿಯು ಪರೀಕ್ಷೆಯನ್ನು ಖಾಸಗಿಯಾಗಿ, ಪುನರಾವರ್ತಿತವಾಗಿ ತೆಗೆದುಕೊಳ್ಳುತ್ತಾರೆ. ಆನ್ಲೈನ್ ಮೂಲಕ ನೋಂದಣಿಗೆ ಅವಕಾಶ ಮಾಡಿಕೊಡುತ್ತಿರುವುದು ವಿದ್ಯಾರ್ಥಿಗಳ ಅಲೆದಾಟ ತಪ್ಪಿಸಲಿದೆ. ಸಮಯದ ಉಳಿತಾಯವಾಗಲಿದ್ದು, ಆ ಸಮಯವನ್ನು ಓದಿಗೆ ಮೀಸಲಿಡಬಹುದು. ಇದುವರೆಗೂ ಖಾಸಗಿ ವಿದ್ಯಾರ್ಥಿಗಳ ಉತ್ತೀರ್ಣತೆಯ ಪ್ರಮಾಣವೂ ಅತ್ಯಂತ ಕಡಿಮೆ ಇದೆ. ಹೊಸ ನಿಯಮ ಪರೀಕ್ಷಾ ಫಲಿತಾಂಶದ ಹೆಚ್ಚಳಕ್ಕೂ ದಾರಿ ಮಾಡಿಕೊಡುವ ನಿರೀಕ್ಷೆ ಇದೆ’ ಎನ್ನುತ್ತಾರೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಬಿ.ಸಿದ್ದಬಸಪ್ಪ, ಪದವಿಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್. ನಿಂಗೇಗೌಡ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.