ಬೆಂಗಳೂರು: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಇನ್ನು ಮುಂದೆ ಮನೆಯಲ್ಲೇ ಕುಳಿತು ಮರು ಮೌಲ್ಯಮಾಪನ ಹಾಗೂ ಅಂಕಗಳ ಮರು ಎಣಿಕೆಗೆ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಬಹುದು.

ಫಲಿತಾಂಶದ ನಂತರ ವಿದ್ಯಾರ್ಥಿಗಳು ತಾವು ಕಲಿತ ಶಾಲೆಗೆ ತೆರಳಿ, ಮರು ಮೌಲ್ಯಮಾಪನ ಹಾಗೂ ಅಂಕಗಳ ಮರು ಎಣಿಕೆಗೆ ಅರ್ಜಿ ಸಲ್ಲಿಸಬೇಕಿತ್ತು. ಅತ್ಯಂತ ಕಡಿಮೆ ಸಮಯದಲ್ಲಿ ವಿದ್ಯಾರ್ಥಿಗಳು ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಿರುವ ಕಾರಣ, ಮೊಬೈಲ್ನಲ್ಲೇ ಈ ಕಾರ್ಯ ಕೈಗೊಳ್ಳಲು ಅನುಕೂಲವಾಗುವಂತೆ ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಒನ್ ಆ್ಯಪ್ ಮೂಲಕ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಲು ಅವಕಾಶ ಮಾಡಿಕೊಟ್ಟಿದೆ.

ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶುಕ್ರವಾರ ಆ್ಯಪ್ ಬಿಡುಗಡೆ ಮಾಡಿದ ಕೆಲ ಗಂಟೆಗಳಲ್ಲೇ 500 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.