ಮಡಿಕೇರಿ: ‘ಮಾರ್ಚ್, ಏಪ್ರಿಲ್ನಲ್ಲಿ ನಡೆದಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಮೇ 19ರಂದು ಪ್ರಕಟಿಸಲಾಗುವುದು’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಇಲ್ಲಿ ಶುಕ್ರವಾರ ಹೇಳಿದರು.
‘ಅಂದು ಬೆಳಿಗ್ಗೆ 10.30ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಸಂಜೆ ವೇಳೆಗೆ ರಾಜ್ಯದ ಎಲ್ಲ ಶಾಲೆಗಳಲ್ಲೂ ಫಲಿತಾಂಶ ದೊರೆಯಲಿದೆ. ಇಲಾಖೆ ವೆಬ್ಸೈಟ್ನಲ್ಲೂ ಪ್ರಕಟಿಸಲಾಗುವುದು’ ಎಂದು ತಿಳಿಸಿದರು.
‘ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮೇ 16ರಂದು ತುಮಕೂರಿನಲ್ಲಿ ಚಾಲನೆ ನೀಡುವರು. ಕಲಿಕಾ ಚೇತರಿಕೆ ವರ್ಷವಿಡೀ ನಡೆಯಲಿದೆ. ನಿಗದಿಯಂತೆ ಮೇ 16ರಿಂದಲೇ ಶಾಲೆ ಆರಂಭವಾಗಲಿದೆ’ ಎಂದು ಹೇಳಿದರು.