ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SSLC Result 2024: ನಾಳೆ ಎಸ್ಸೆಸ್ಸೆಲ್ಸಿ ಫಲಿತಾಂಶ

Published 8 ಮೇ 2024, 8:54 IST
Last Updated 8 ಮೇ 2024, 9:38 IST
ಅಕ್ಷರ ಗಾತ್ರ

ಬೆಂಗಳೂರು: 2023–24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ 9ರಂದು ಪ್ರಕಟವಾಗಲಿದೆ. 

ಮಾರ್ಚ್‌ 25ರಿಂದ ಏ.6ರವರೆಗೆ ರಾಜ್ಯದ 2,750 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಆಯಾ ವಿಷಯಗಳ ಪರೀಕ್ಷೆಗಳು ಮುಗಿದ ಮರು ದಿನಗಳಿಂದಲೇ ಮೌಲ್ಯಮಾಪನ ಕಾರ್ಯ ಆರಂಭಿಸಲಾಗಿತ್ತು. ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಬೆಳಿಗ್ಗೆ 10.30ಕ್ಕೆ ಫಲಿತಾಂಶ ಪ್ರಕಟಿಸಲಾಗುವುದು. ಫಲಿತಾಂಶವನ್ನು ಮಂಡಳಿಯ ಜಾಲತಾಣ https://karresults.nic.in ನಲ್ಲಿ ವೀಕ್ಷಿಸಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ  ಹೇಳಿದೆ.

4.41 ಲಕ್ಷ ಬಾಲಕರು, 4.28 ಲಕ್ಷ ಬಾಲಕಿಯರೂ ಸೇರಿದಂತೆ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಇದೇ ಮೊದಲ ಬಾರಿ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದ್ದು, ಮೇ ಮೂರನೇ ವಾರದಲ್ಲೇ ಎರಡನೇ ಪರೀಕ್ಷೆ ಆರಂಭವಾಗಲಿವೆ. ಉತ್ತೀರ್ಣರಾದ ವಿದ್ಯಾರ್ಥಿಗಳು ಸಹ ತಮ್ಮ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಉಳಿದ ಎರಡು ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು. ಯಾವ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳು ಬರುತ್ತವೆಯೋ ಅದರ ಅಂಕಪಟ್ಟಿ ಪಡೆಯಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT