ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಟಿ ಪಟ್ಟಿಗೆ ಈಡಿಗ ಸಮುದಾಯಕ್ಕೆ ಆಗ್ರಹ ಜ. 6 ರಿಂದ ಪಾದಯಾತ್ರೆಗೆ ನಿರ್ಧಾರ

Last Updated 10 ಡಿಸೆಂಬರ್ 2022, 20:59 IST
ಅಕ್ಷರ ಗಾತ್ರ

ಗಂಗಾವತಿ (ಕೊಪ್ಪಳ ಜಿಲ್ಲೆ):ಈಡಿಗ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಬೆಕು. ಸೇಂದಿ ಇಳಿಸಲು ಅವಕಾಶ ನೀಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಗಳೂರಿನಿಂದ ಬೆಂಗಳೂರಿಗೆ ಜನವರಿ 6ರಿಂದ ಪಾದಯಾತ್ರೆ ನಡೆಸಲಿದ್ದೇವೆ ಎಂದು ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು, ‘658‌ ಕಿ.ಮೀ. ಪಾದಯಾತ್ರೆ ನಡೆಸಿ, ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.

ರಾಜ್ಯದಲ್ಲಿಈಡಿಗ ಸಮಾಜದ ಜನಸಂಖ್ಯೆ 70 ಲಕ್ಷ ಇದೆ. ಈಡಿಗ ಸಮಾಜದ 7 ಶಾಸಕರು, ಇಬ್ಬರು ಮಂತ್ರಿಗಳು ಇದ್ದರೂ ಅಭಿವೃದ್ಧಿಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ.2004ರಲ್ಲಿ ಈಡಿಗ ಸಮಾಜದ ಕಸುಬು ಕಸಿದುಕೊಂಡು ಪರ್ಯಾಯ ವ್ಯವಸ್ಥೆ ನೀಡದೆ, ಕತ್ತಲಲ್ಲಿ ಕವಿಯುವಂತೆ ಮಾಡಿದೆ ಎಂದು ದೂರಿದರು.ರಾಜ್ಯದಲ್ಲಿ ಪರವಾನಗಿ ಇಲ್ಲದೆ ಈಚಲು ಮರ ಕಡಿಯುವಂತಿಲ್ಲ. ಮಕ್ಕಳ ಶಿಕ್ಷಣಕ್ಕೆ ಸಾಲ ವ್ಯವಸ್ಥೆ ಇದೆ. ಕರ್ನಾಟಕದಲ್ಲಿ ಏಕೆ ಸೇಂದಿ ಇಳಿಕೆ ಸೌಲಭ್ಯವಿಲ್ಲ ಎಂದು ಅವರು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT