ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲದಲ್ಲಿ ಶುಕ್ರವಾರ ಕ್ರಿಕೆಟ್ ಟೂರ್ನಿ ವೇಳೆ ಚಾಕು ಇರಿದು ಯುವಕರಿಬ್ಬರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಲಿಕುಂಟೆ ಗ್ರಾಮದ ಕಾಂಗ್ರೆಸ್ ಮುಖಂಡನ ಪುತ್ರ ವಿನಯ್ ಹಾಗೂ ಆತನ ನಾಲ್ವರು ಸ್ನೇಹಿತರ ವಿರುದ್ಧ ಪ್ರಕರಣ ದಾಖಲಾಗಿದೆ.

ಚಾಕು ಇರಿತದಿಂದ ಮೃತಪಟ್ಟ ಬಿ.ಇ ಪದವೀಧರ ಭರತ್ಕುಮಾರ್ ಅವರ ತಂದೆ ಶಿವಪ್ರಕಾಶ್ ನೀಡಿದ ದೂರಿನ ಮೇರೆಗೆ ಹುಲಿಕುಂಟೆ ನಿವಾಸಿಗಳಾದ ವಿನಯ್, ಅನಿಲ್, ತ್ರೀಮೂರ್ತಿ, ಕೋರಿ, ದೀಪು ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಐವರೂ ಆರೋಪಿಗಳು ತಲೆಮರೆಸಿಕೊಂಡಿದ್ದು, ಇದುವರೆಗೂ ಅವರ ಸುಳಿವು ದೊರೆತಿಲ್ಲ. ಆರೋಪಿಗಳಿಗಾಗಿ ಪೊಲೀಸರ ತಂಡಗಳು ಹುಡುಕಾಟ ನಡೆಸಿವೆ. ಶೀಘ್ರ ಆರೋಪಿಗಳನ್ನು ಬಂಧಿಸದಿದ್ದರೆ ಪೊಲೀಸ್ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ದೊಡ್ಡಬೆಳವಂಗಲ ಬಂದ್: ‘ಆರೋಪಿಗಳನ್ನು ಬಂಧಿಸುವವರೆಗೂ ಮೃತ ಯುವಕರ ಅಂತ್ಯಕ್ರಿಯೆ ನಡೆಸುವುದಿಲ್ಲ’ ಎಂದು ಗ್ರಾಮಸ್ಥರು ಶನಿವಾರ ದಾಬಸ್ಪೇಟೆ- ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.