ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಅಭ್ಯರ್ಥಿಗಳ ‘ಹೊಂದಾಣಿಕೆ ರಾಜಕೀಯ’ಕ್ಕೆ ಅವಕಾಶ ನೀಡದಿರಲು ರಾಜ್ಯ ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.

‘ಕಳೆದ ಕೆಲವು ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ವಿರೋಧಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಸ್ಥಳೀಯಮಟ್ಟದಲ್ಲಿ ‘ರಾಜಕೀಯ’ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಹೊಂದಾಣಿಕೆ ರಾಜಕೀಯವು ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುತ್ತದೆ. ಇದರಿಂದ ಪಕ್ಷಕ್ಕೆ ಹಾನಿಯಾಗುತ್ತಿದೆ. ಹೀಗಾಗಿ, ಅಂತಹ ಬೆಳವಣಿಗೆಗೆ ಈ ಬಾರಿ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ’ ಎಂದು ಮುಖಂಡರೊಬ್ಬರು ತಿಳಿಸಿದರು.

‘ಬೆಳಗಾವಿ, ದಕ್ಷಿಣ ಕನ್ನಡ, ಬೆಂಗಳೂರು, ರಾಮನಗರದಲ್ಲಿ ಇಂಥ ಹೊಂದಾಣಿಕೆ ಈ ಹಿಂದಿನ ಚುನಾವಣೆಗಳಲ್ಲಿ ಆಗಿವೆ. ತಮ್ಮ ಸ್ಥಾನವನ್ನು ಗಟ್ಟಿ ಮಾಡಿಕೊಳ್ಳಲು ಕೆಲವರು ಈ ರೀತಿಯ ಒಳ ಒಪ್ಪಂದದ ರಾಜಕೀಯ ಮಾಡಿಕೊಳ್ಳುತ್ತಾರೆ’ ಎಂದೂ ಅವರು ಹೇಳಿದರು.

ವಾಸ್ತವಾಂಶ ಬಿಚ್ಚಿಡಬೇಕು– ಸಲಹೆ: ‘ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ನಲ್ಲಿ ಏನೂ ಇಲ್ಲ. ಇದೊಂದು ಚುನಾವಣಾ ಗಿಮಿಕ್. ಇದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕಿದೆ. ಸದನ ಒಳಗೆ ಮತ್ತು ಹೊರಗೆ ಬಜೆಟ್ ಬಗ್ಗೆ ವಾಸ್ತವಾಂಶ ಬಿಚ್ಚಿಡಬೇಕು’ ಎಂದು ಪಕ್ಷದ ಶಾಸಕರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ರ್ಯಾಡಿಸನ್ ಬ್ಲ್ಯೂ ಹೋಟೆಲ್ನಲ್ಲಿ ಶುಕ್ರವಾರ ರಾತ್ರಿ ಸುಮಾರು ಎರಡು ಗಂಟೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ, ಸರ್ಕಾರದ ವಿರುದ್ಧ ಹಮ್ಮಿಕೊಳ್ಳಬೇಕಾದ ಹೋರಾಟ ಮತ್ತು ಚುನಾವಣಾ ರಣತಂತ್ರ ಕುರಿತು ಸಮಾಲೋಚನೆ ನಡೆದಿದೆ.

‘ಎಲ್ಲರೂ ಒಟ್ಟಾಗಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಪಕ್ಷ ಅಧಿಕಾರಕ್ಕೆ ಬಂದರೆ ಸಹಜವಾಗಿಯೇ ಎಲ್ಲರಿಗೂ ಅಧಿಕಾರ ಸಿಗಲಿದೆ. ಹೀಗಾಗಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಟಿಕೆಟ್ ಸಿಗದೆ ಇದ್ದರೆ ಬಂಡಾಯಕ್ಕೆ ಅವಕಾಶ ನೀಡದಂತೆ ನೋಡಿಕೊಳ್ಳಬೇಕು. ಮೊದಲ ಹಂತದಲ್ಲಿ ಕನಿಷ್ಠ 140 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಬೇಕೆಂದು ವರಿಷ್ಠರಿಗೆ ಶಿಫಾರಸು ಮಾಡಲಾಗಿದೆ. ಮಾರ್ಚ್ 10ರೊಳಗೆ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಘೋಷಣೆ ಯಾಗಲಿದೆ’ ಎಂದು ಸಭೆಗೆ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ.

‘ಕಿವಿಗೆ ಹೂವು’: ಕಾಂಗ್ರೆಸ್ನಿಂದ ಬೀದಿ ಅಭಿಯಾನ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಬಜೆಟ್ ಮಂಡಿಸಿದ ಸಂದರ್ಭದಲ್ಲಿ, ಕಿವಿ ಮೇಲೆ ಹೂವು ಇಟ್ಟುಕೊಂಡು ಕಾಂಗ್ರೆಸ್ ಶಾಸಕರು ವ್ಯಕ್ತಪಡಿಸಿದ್ದ ಪ್ರತಿಭಟನೆಗೆ ಹೆಚ್ಚು ಪ್ರಚಾರ ಸಿಗುತ್ತಿದ್ದಂತೆ, ಅದನ್ನು ಬೀದಿ ಅಭಿಯಾನದಂತೆ ಪಕ್ಷ ಮುಂದುವರಿಸಿದೆ.

ನಗರದ ಕೆಲವು ಕಡೆ ಕಿವಿ ಮೇಲೆ ಹೂವು ಅಭಿಯಾನ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ರಸ್ತೆ ಬದಿಯ ಗೋಡೆಗಳ ಮೇಲೆ ಭಿತ್ತಿಪತ್ರಗಳನ್ನು ಅಂಟಿಸಿದ್ದಾರೆ.

‘ಬಿಜೆಪಿಯೇ ಭರವಸೆ’ ಎಂಬ ಪೋಸ್ಟರ್ಗಳನ್ನು ಬಿಜೆಪಿ ಹಲವೆಡೆ ಹಾಕಿದೆ. ಅವುಗಳ ಮೇಲೆ ಕಾಂಗ್ರೆಸ್ ಕಾರ್ಯಕರ್ತರು, ಕಿವಿಗೆ ಹೂವು ಇಟ್ಟುಕೊಂಡಿರುವ ಚಿತ್ರಗಳಿರುವ ‘ಸಾಕಪ್ಪಾ ಸಾಕು’ ಎಂದು ಬರೆದಿರುವ ಪೋಸ್ಟರ್ಗಳನ್ನು ಅಂಟಿಸಲಾಗಿದೆ. ಬ್ಯಾಟರಾಯನಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಶಾಸಕ ಕೃಷ್ಣಬೈರೇಗೌಡ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಈ ಭಿತ್ತಿಪತ್ರಗಳನ್ನು ಅಂಟಿಸಿದ್ದಾರೆ.

ರಾಜ್ಯ ಸರ್ಕಾರದ ಸಾಧನೆಗಳನ್ನು ಹೇಳಿಕೊಂಡ ಪೋಸ್ಟರ್ಗಳ ಸುತ್ತಮುತ್ತ ಅದನ್ನು ಲೇವಡಿ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಈ ಭಿತ್ತಿಪತ್ರಗಳನ್ನು ಅಂಟಿಸಿರುವುದು ಬಿಜೆಪಿ ಕಾರ್ಯಕರ್ತರನ್ನು ಕೆರಳಿಸಿದೆ.

ರಾಜ್ಯ ಸರ್ಕಾರ ‘ಶೇ 40 ಕಮಿಷನ್ ಸರ್ಕಾರ’ ಎಂದು ಆರೋಪಿಸಿ, ಕಾಂಗ್ರೆಸ್ ಇತ್ತೀಚೆಗೆ ‘ಪೇ ಸಿಎಂ’ ಅಭಿಯಾನ ನಡೆಸಿತ್ತು. ಈ ಅಭಿಯಾನ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು.

ಕಾಂಗ್ರೆಸ್ನಿಂದ ‘ಕೋವಿಡ್ ಫೈಲ್ಸ್’?

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ‘ಕೋವಿಡ್ ಫೈಲ್ಸ್’ ಎಂಬ ಸಾಕ್ಷ್ಯಚಿತ್ರವನ್ನು ಸದ್ದಿಲ್ಲದೆ ಸಿದ್ಧಪಡಿಸಿ ಮತದಾರರ ಬಳಿಗೆ ತೆಗೆದುಕೊಂಡು ಹೋಗಲು ರಾಜ್ಯ ಕಾಂಗ್ರೆಸ್ ಮುಂದಾಗಿದೆ.

ಕೋವಿಡ್ ಸಂದರ್ಭದಲ್ಲಿ ಚಿಕಿತ್ಸೆ ಸಿಗದೆ ಜನರು ಪಟ್ಟ ಪಾಡು, ಚಾಮರಾಜನಗರದಲ್ಲಿ ಆಮ್ಲಜನಕ ಕೊರತೆಯಿಂದ ಸಂಭವಿಸಿದ ಸಾವು, ಕೋವಿಡ್ಗೆ ರಾಜ್ಯ ಸರ್ಕಾರ ಸ್ಪಂದಿಸಿದ ರೀತಿ, ಕೇಳಿಬಂದ ಭ್ರಷ್ಟಾಚಾರ ಆರೋಪ ವಿಷಯ ಆಧರಿಸಿ ಸಾಧುಕೋಕಿಲ ಅವರ ಮೂಲಕ ಈ ಸಾಕ್ಷ್ಯಚಿತ್ರ ತಯಾರಿಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.