ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಶಿಕ್ಷಣ ನೀತಿ: ಸಮಿತಿ ರಚಿಸಲು ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ನಿರ್ಧಾರ

Published 21 ಆಗಸ್ಟ್ 2023, 23:30 IST
Last Updated 21 ಆಗಸ್ಟ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಶಿಕ್ಷಣ ನೀತಿ ರೂಪಿಸಲು ವಾರದ ಒಳಗೆ ಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ನಡೆದ ಸಭೆ ನಿರ್ಧರಿಸಿದೆ.

‘ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಅಗತ್ಯ ಮೂಲಸೌಕರ್ಯ ಕಲ್ಪಿಸದೇ ಎರಡು ವರ್ಷಗಳ ಹಿಂದೆ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಿತ್ತು. ಅದರಲ್ಲಿ ಸಾಕಷ್ಟು ಲೋಪಗಳಿವೆ. ಹಾಗಾಗಿ, ನಾಗ್ಪುರ ಶಿಕ್ಷಣ ನೀತಿ ರದ್ದು ಮಾಡಿದ್ದೇವೆ. ಹೊಸ ಶಿಕ್ಷಣ ನೀತಿ ಸಿದ್ಧಪಡಿಸುತ್ತಿದ್ದೇವೆ. ಅಲ್ಲಿಯವರೆಗೂ ಹಿಂದಿನ ಹಳೆಯ ಶಿಕ್ಷಣ ಪದ್ಧತಿಯನ್ನೇ ಮುಂದುವರಿಸಲಾಗುವುದು’ ಎಂದು ಸಭೆಯ ನಂತರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು.

‘ಶಾಲಾ ಶಿಕ್ಷಣ, ಉನ್ನತ ಶಿಕ್ಷಣ ಸಚಿವರಿಗೆ ಸಮಿತಿಯ ರೂಪುರೇಷೆ, ಸಂಭವನೀಯ ಅಧ್ಯಕ್ಷರು, ಸದಸ್ಯರ ಪಟ್ಟಿ ನೀಡಲು ಸೂಚಿಸಿದ್ದೇವೆ. ವಾರದ ಒಳಗೆ ಎಲ್ಲ ಪ್ರಕ್ರಿಯೆ ಪೂರ್ಣಗೊಂಡು ಸಮಿತಿ ರಚನೆಯಾಗಲಿದೆ’ ಎಂದರು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT