ಬೆಂಗಳೂರು: ರಾಜ್ಯ ಶಿಕ್ಷಣ ನೀತಿ ಆಯೋಗವು (ಎಸ್ಇಪಿ) ಸಲ್ಲಿಸಿರುವ ಅಂತಿಮ ವರದಿಯನ್ನು ಪರಾಮರ್ಶಿಸಿ, ಸೂಕ್ತ ಶಿಫಾರಸು ಗಳನ್ನು ಮಾಡಲು ಗೃಹ ಸಚಿವ ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿಯನ್ನು ಸರ್ಕಾರ ರಚಿಸಿದೆ.

ಕಾನೂನು ಸಚಿವ ಎಚ್.ಕೆ.ಪಾಟೀಲ, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಈಚೆಗೆ ನಡೆದಿದ್ದ ಸಂಪುಟ ಸಭೆಯಲ್ಲಿ ವರದಿಯ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಗಿತ್ತು. ವರದಿಯನ್ನು ಅಧ್ಯಯನ ಮಾಡಿ, ಶಿಫಾರಸುಗಳ ಅನುಷ್ಠಾನಕ್ಕೆ ವರದಿ ನೀಡಲು ಉಪ ಸಮಿತಿ ರಚಿಸಲು ನಿರ್ಧರಿಸಿ, ಸಮಿತಿಯ ರಚನೆ ಅಧಿಕಾರವನ್ನು ಮುಖ್ಯಮಂತ್ರಿಗೆ ನೀಡಲಾಗಿತ್ತು.

ಬಿಜೆಪಿ ಆಡಳಿತದ ಅವಧಿಯಲ್ಲಿ ತರಾತುರಿಯಲ್ಲಿ ಸಿದ್ಧಪಡಿಸಿದ್ದ ರಾಷ್ಟ್ರೀಯ ಹೊಸ ಶಿಕ್ಷಣ ನೀತಿಯನ್ನು ರದ್ದು ಮಾಡುವುದಾಗಿ ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಘೋಷಿಸಿತ್ತು. ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ರಾಷ್ಟ್ರೀಯ ಶಿಕ್ಷಣ ನೀತಿ ಬದಲು ರಾಜ್ಯ ಶಿಕ್ಷಣ ನೀತಿ ರೂಪಿಸಲು ಸುಖದೇವ್ ಥೋರಟ್ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಲಾಗಿತ್ತು. 2,197 ಪುಟಗಳಿರುವ ಮೂರು ಸಂಪುಟ ಒಳಗೊಂಡ ತನ್ನ ಅಂತಿಮ ವರದಿಯನ್ನು ಜುಲೈ 8ರಂದು ಸರ್ಕಾರಕ್ಕೆ ಸಲ್ಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.