ಬೆಂಗಳೂರು: ‘ರಾಜ್ಯದಲ್ಲಿ ಜನರಿಂದ ಜನರಿಗಾಗಿ ಜನರಿಗೋಸ್ಕರ ಯೋಜನೆಗಳನ್ನು 2021-22ನೇ ಸಾಲಿನಿಂದ ಜಾರಿಗೆ ತರಲು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ನಡೆದ ಕನಾಟಕ ರಾಜ್ಯ ವೀಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ನಾಲ್ಕು ವರ್ಷಗಳಲ್ಲಿ ಮೊದಲ ಬಾರಿಗೆ ಈ ಸಭೆ ನಡೆದಿದೆ. ಇನ್ನು ಮುಂದೆ ವರ್ಷಕ್ಕೆರಡು ಬಾರಿ ಸಭೆ ಏರ್ಪಡಿಸಬೇಕ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ವೀಕೇಂದ್ರೀಕರಣ ಯೋಜನಾ ಪ್ರಕ್ರಿಯೆಯ ಬಲವರ್ಧನಗೆ ಸರ್ಕಾರ 2019ರಲ್ಲೇ ವಿವರವಾದ ಮಾರ್ಗಸೂಚಿಯನ್ನು ಹೊರಡಿಸಿದೆ. ಅದನ್ನು ಪಂಚಾಯತ್ ರಾಜ್ ಸಂಸ್ಥೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳು ಸಮರ್ಪಕವಾಗಿ ಪಾಲಿಸಬೇಕು. ಜನರ ಬೇಡಿಕೆಗೆ ತಕ್ಕಂತೆ ಸರ್ಕಾರದ ಯೋಜನೆ ರೂಪಿಸಲು ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆ ಹಂತದಿಂದ, ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯಮಟ್ಟದವರೆಗಿನ ಸಮಿತಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು’ ಎಂದು ಮುಖ್ಯಮಂತ್ರಿ ಸಲಹೆ ನೀಡಿದರು.

‘ಸಭೆಯಲ್ಲಿ ಸಮಿತಿಯ ಸದಸ್ಯರ ಅಭಿಪ್ರಾಯಗಳನ್ನು ಆಲಿಸಿದ ಮುಖ್ಯಮಂತ್ರಿ, ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿಗೆ ತಹಶೀಲ್ದಾರರನ್ನು ಸದಸ್ಯರನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಉಳಿದ ಸಲಹೆಗಳನ್ನು ರಾಜ್ಯದ ಹಣಕಾಸು ಪರಿಸ್ಥಿತಿಗೆ ಅನುಗುಣವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್, ಸಮಿತಿಯ ಉಪಾಧ್ಯಕ್ಷ ಪ್ರಮೋದ್ ಹೆಗಡೆ ಹಾಗೂ ಸಮಿತಿಯ ಸದಸ್ಯರು, ಯೋಜನಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್, ಕಾರ್ಯದರ್ಶಿ ಉಮಾ ಮಹಾದೇವನ್ ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.