ಬೆಂಗಳೂರು: ‘ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯನ್ನು ಅಕ್ಟೋಬರ್ ಕೊನೆಯ ವಾರ ನಡೆಸಲು ರಾಜ್ಯ ಕಾರ್ಯಕಾರಿಯಲ್ಲಿ ನಿರ್ಣಯ ಕೈಗೊಳ್ಳಲಾಯಿತು’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.
‘ಸಂಘದ ಅಧಿಕಾರವಧಿ ಆ.8ಕ್ಕೆ ಮುಕ್ತಾಯವಾಗಿದೆ. ಸೆಪ್ಟೆಂಬರ್‌ನಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಲಾಗಿತ್ತು. ದಸರಾ ರಜೆಯ ಕಾರಣಕ್ಕೆ ಶಿಕ್ಷಕರಿಗೆ ತೊಂದರೆ ಆಗಬಹುದು ಎಂಬ ಕಾರಣಕ್ಕೆ ಸಮಯ ಬದಲಾವಣೆ ಮಾಡಲಾಗಿದೆ. ಅಕ್ಟೋಬರ್‌ನಲ್ಲಿ ನಿರ್ದೇಶಕ ಸ್ಥಾನಗಳಿಗೆ, ನವೆಂಬರ್‌ನಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಘಟಕ್ಕೆ, ಆ ಬಳಿಕ ರಾಜ್ಯ ಘಟಕಕ್ಕೆ ಚುನಾವಣೆ ನಡೆಸಲಾಗುತ್ತದೆ. ಶೀಘ್ರದಲ್ಲೇ ಅಧಿಸೂಚನೆ ಪ್ರಕಟಿಸಲಾಗುತ್ತದೆ’ ಎಂದು ಷಡಾಕ್ಷರಿ ತಿಳಿಸಿದರು.