ಬೆಂಗಳೂರು: ರಾಜ್ಯ ಸರ್ಕಾರದ ಬಗ್ಗೆ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು ಸಂಗತಿಗಳನ್ನು ಅಳವಡಿಸಿಕೊಂಡು ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ ಮಾಡಿದೆ ಎಂದು ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತಂತೆ ಒಳಾಡಳಿತ ಇಲಾಖೆ ಭಾನುವಾರ ಅಧಿಸೂಚನೆ ಹೊರಡಿಸಿದೆ.

ಬೆಂಗಳೂರಿನ 42ನೇ ಸಿಎಂಎಂ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಗೆ ಒಳಾಡಳಿತ ಇಲಾಖೆ ಸೂಚನೆ ನೀಡಿದೆ. ಈ ಪ್ರಕರಣವನ್ನು ನಿರ್ವಹಿಸಲು 67ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಸರ್ಕಾರಿ ವಕೀಲ ಬಿ.ಎಸ್. ಪಾಟೀಲ್ ಮತ್ತು ಬೆಂಗಳೂರಿನ 61ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಸರ್ಕಾರಿ ವಕೀಲರಾದ ಶೈಲಜಾ ನಾಯಕ್ ಅವರನ್ನು ನಿಯೋಜಿಸಲಾಗಿದೆ.

ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ‘ರಾಜ್ಯ ಸರ್ಕಾರದ 2 ವರ್ಷಗಳ ವೈಫಲ್ಯ ಬಗ್ಗೆ ಆರೋಪ ಪಟ್ಟಿ’ ಎಂಬ ಶೀರ್ಷಿಕೆಯಡಿ ಬಿಜೆಪಿಯು ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡಿದೆ ಎಂದು ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.