ಬೆಂಗಳೂರು: ‘ಚಾಮರಾಜಪೇಟೆಯ ಛಲವಾದಿ ಪಾಳ್ಯದಲ್ಲಿರುವ ಪಶು ಚಿಕಿತ್ಸಾಲಯದ ಎರಡು ಎಕರೆ ಜಾಗವನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದ ಆದೇಶವನ್ನು ಹಿಂಪಡೆಯಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.

ಈ ಸಂಬಂಧ ಹೈಕೋರ್ಟ್ ವಕೀಲ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಆದೇಶ ಹಿಂಪಡೆದಿರುವ ಕುರಿತಂತೆ ಪಶುಸಂಗೋಪನಾ ಮತ್ತು ಮೀನುಗಾರಿಕೆ ಇಲಾಖೆಯ ಅಧೀನ ಕಾರ್ಯದರ್ಶಿ ಪತ್ರವನ್ನು ಮೆಮೊ ಮೂಲಕ ನ್ಯಾಯಪೀಠಕ್ಕೆ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿ ಆದೇಶಿಸಿತು. ಅರ್ಜಿದಾರರ ಪರ ಹೈಕೋರ್ಟ್ ವಕೀಲ ವೆಂಕಟೇಶ ಪಿ.ದಳವಾಯಿ ವಾದ ಮಂಡಿಸಿದ್ದರು.

ಕೋರಿಕೆ ಏನಿತ್ತು?: ‘ಪಶು ಸಂಗೋಪನಾ ಇಲಾಖೆಯ ಸುಪರ್ದಿಯಲ್ಲಿದ್ದ ಜಾಗವನ್ನು ಚಾಮರಾಜಪೇಟೆಯ ಶಾಸಕರೂ ಆಗಿರುವ ಸಚಿವ ಜಮೀರ್ ಅಹ್ಮದ್ ಖಾನ್ ತಮ್ಮ ಪ್ರಭಾವ ಬಳಸಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರ ಆಗುವಂತೆ ಮಾಡಿದ್ದಾರೆ. ಈ ಜಾಗದಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಹಾಸ್ಟೆಲ್ ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದೆ. ಇಲ್ಲಿನ ಆಸ್ಪತ್ರೆ ಹಾಗೂ ಸಿಬ್ಬಂದಿಯನ್ನು ಜಯನಗರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ 2024ರ ಫೆಬ್ರುವರಿ 26ರಂದು ಹೊರಡಿಸಿರುವ ಆದೇಶವನ್ನು ರದ್ದುಪಡಿಸಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.