ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರ, ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ: ಸರ್ಕಾರದಿಂದ 2018ರ ಆದೇಶ ವಾಪಸ್

2018 ಸೆಪ್ಟೆಂಬರ್ 3ರ ಮೀಸಲಾತಿ ಆದೇಶ ವಾಪಸ್ ಪಡೆದಿರುವುದಾಗಿ ಹೈಕೋರ್ಟ್‌ಗೆ ಹೇಳಿಕೆ
Last Updated 7 ನವೆಂಬರ್ 2019, 12:20 IST
ಅಕ್ಷರ ಗಾತ್ರ

ಬೆಂಗಳೂರು: ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ 2018ರ ಸೆಪ್ಟೆಂಬರ್ 3ರಂದು ಹೊರಡಿಸಿದ್ದ ಅಧಿಸೂಚನೆ ವಾಪಸು ಪಡೆದಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತ ಮೇಲ್ಮನವಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಈ ಕುರಿತಂತೆ ನ್ಯಾಯಪೀಠಕ್ಕೆ ಮಾಹಿತಿ ನೀಡಿದರು."ಅಧ್ಯಕ್ಷ- ಉಪಾಧ್ಯಕ್ಷರ ಮೀಸಲಾತಿ ಸಂಬಂಧ 2018ರ ಸೆಪ್ಟೆಂಬರ್ 3 ರಂದು ಹೊರಡಿಸಲಾದ ಅಧಿಸೂಚನೆ ವಾಪಸು ಪಡೆಯಲು ಸರ್ಕಾರ ನಿರ್ಧರಿಸಿದೆ. ಒಂದು ತಿಂಗಳಲ್ಲಿ ಮೀಸಲಾತಿ ಮರು ನಿಗದಿಗೊಳಿಸಿ ಹೊಸ ಅಧಿಸೂಚನೆ ಹೊರಡಿಸಲಾಗುವುದು" ಎಂದು ಎಜಿ ನ್ಯಾಯಪೀಠಕ್ಕೆ ತಿಳಿಸಿದರು.

ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ಮೇಲ್ಮನವಿಗಳನ್ನು ವಿಲೇವಾರಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT