ಶಾಲೆಗಳಲ್ಲಿ ಉತ್ತಮ ಬೋಧನೆಯ ಜೊತೆಗೆ ಮಕ್ಕಳ ಪ್ರತಿಭೆಯ ವಿಕಸನಕ್ಕೆ ಶ್ರಮಿಸಿದ, ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ವಿಶಿಷ್ಟ ಕೊಡುಗೆ ನೀಡಿದ ಶಿಕ್ಷಕರು, ವಿಶೇಷ ಶಿಕ್ಷಕರು, ಮುಖ್ಯ ಶಿಕ್ಷಕರು www.schooleducation.kar.nic.in ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಶಿಕ್ಷಕರಿಗೆ ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯುಕ್ತೆ ಬಿ.ಬಿ. ಕಾವೇರಿ ತಿಳಿಸಿದ್ದಾರೆ.