ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಸ್ಥಾನಗಳ ಅಧಿವೇಶನ ಇದೇ 16ರಿಂದ

Published 13 ಡಿಸೆಂಬರ್ 2023, 15:54 IST
Last Updated 13 ಡಿಸೆಂಬರ್ 2023, 15:54 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ದೇವಸ್ಥಾನ, ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದಿಂದ ಇದೇ 16 ಮತ್ತು 17ರಂದು ಬಸವೇಶ್ವರ ನಗರದ ಗಂಗಮ್ಮ ತಿಮ್ಮಯ್ಯ ಕನ್ವೆನ್ಷನ್‌ ಹಾಲ್‌ನಲ್ಲಿ ‘ದೇವಸ್ಥಾನಗಳ ರಾಜ್ಯಮಟ್ಟದ ಅಧಿವೇಶನ’ ನಡೆಯಲಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಮೋಹನ್‌ ಗೌಡ, ‘ಪ್ರಾಚೀನ ದೇವಸ್ಥಾನಗಳ ರಕ್ಷಣೆ, ದೇವಸ್ಥಾನಗಳನ್ನು ಸರ್ಕಾರದ ವ್ಯಾಪ್ತಿಗೆ ಸೇರಿಸುವುದು ಹಾಗೂ ಭಕ್ತರಿಗೆ ಮೂಲಸೌಲಭ್ಯಗಳನ್ನು ಒದಗಿಸುವ ಕುರಿತು ಚರ್ಚಿಸಲು ಈ ಅಧಿವೇಶನ ಆಯೋಜಿಸಲಾಗುತ್ತಿದೆ. ರಾಜ್ಯದಲ್ಲಿರುವ ಒಂದು ಸಾವಿರಕ್ಕೂ ಹೆಚ್ಚು ದೇವಾಲಯಗಳ ಅರ್ಚಕರು, ಧಾರ್ಮಿಕ ಚಿಂತಕರು, ನ್ಯಾಯವಾದಿಗಳು ಹಾಗೂ ದೇವಾಲಯಗಳ ರಕ್ಷಣಾ ಹೋರಾಟಗಾರರು ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಯದುಗಿರಿ ಯತಿರಾಜ ಮಠದ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್‌ ಸ್ವಾಮೀಜಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಅಶೋಕ್ ಹಾರನಹಳ್ಳಿ, ಆದಿಚುಂಚನಗಿರಿ ಮಠದ ವಿಜಯನಗರ ಶಾಖಾ ಮಠದ ಸೌಮ್ಯನಾಥ ಸ್ವಾಮೀಜಿ, ಆರ್ಯವೈಶ್ಯ ಮಹಾಸಭಾದ ಅಧ್ಯಕ್ಷ ಆರ್.ಪಿ. ರವಿಶಂಕರ, ಆನಂದ ಗುರೂಜಿ ಭಾಗವಹಿಸಲಿದ್ದಾರೆ. ಅಧಿವೇಶನದಲ್ಲಿ ಪಾಲ್ಗೊಳ್ಳಲು 72040 82609ಗೆ ಸಂಪರ್ಕಿಸಬಹುದು’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT