ಶಿವಮೊಗ್ಗ: ಸಂಪುಟ ವಿಸ್ತರಣೆಯ ನಂತರದ ಬೆಳವಣಿಗೆಗಳು ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಬೇಸರ ತಂದಿವೆ. ಮುಖ್ಯಮಂತ್ರಿ ವಿರುದ್ಧದ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರ ತಂದಿವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿ ಶುಕ್ರವಾರ ಅವರು ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್, ಕಾಂಗ್ರೆಸ್ ತೊರೆದು ಹಲವು ಶಾಸಕರು ಬಾರದೇ ಹೋಗಿದ್ದರೆ. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರಲಿಲ್ಲ. ಅಂದು ಸಹಾಯ ಮಾಡಿದ ಶಾಸಕರಿಗೆ ಸಚಿವ ಸ್ಥಾನ ನೀಡುವುದು ನ್ಯಾಯಸಮ್ಮತ. ಮುಖ್ಯಮಂತ್ರಿ, ಪಕ್ಷದ ಹೈಕಮಾಂಡ್ ನಿರ್ಧಾರ ಬಹಿರಂಗವಾಗಿ ವಿರೋಧಿಸುವುದು ಯಾವ ಶಾಸಕರಿಗೂ ಶೋಭೆ ತರುವುದಿಲ್ಲ ಎಂದರು.

ಮೂಲ, ವಲಸಿಗರು ಎಂಬ ಪ್ರಶ್ನೆಯೇ ಇಲ್ಲ. ಅವರೆಲ್ಲ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಬಿಜೆಪಿ ಟಿಕೆಟ್ ಪಡೆದು ಗೆದ್ದು ಬಂದಿದ್ದಾರೆ. ಪಕ್ಷದ ಚೌಕಟ್ಟು ಮೀರಿದವರು ತೊಂದರೆ ಅನುಭವಿಸುತ್ತಾರೆ. ಇದೇ ಮನೋಸ್ಥಿತಿ ಮುಂದುವರಿದರೆ ಪಕ್ಷದ ವರಿಷ್ಠರು ಶಿಸ್ತು ಕ್ರಮ ಕೈಗೊಳ್ಳುತ್ತಾರೆ ಎಂದು ಎಚ್ಚರಿಸಿದರು.

ಇದನ್ನೂ ಓದಿ:ಕೇಂದ್ರೀಯ ರಸ್ತೆ ನಿಧಿ ಕಾಮಗಾರಿಗೆ ಸಾಲ ಪಡೆಯಲಿದ್ದೇವೆ: ಯಡಿಯೂರಪ್ಪ

ರಾಜ್ಯದಲ್ಲಿ ವಿರೋಧ ಪಕ್ಷ ಅಸ್ತಿತ್ವಕ್ಕಾಗಿ ಹುಡುಕಾಡುತ್ತಿದೆ. ಪಕ್ಷದ ಒಳಗಿನ ಸಮಸ್ಯೆ ಬಗೆಹರಿಸಿಕೊಳ್ಳಲು ಸಾಧ್ಯವಾಗದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಬಿಜೆಪಿ ಸಮಸ್ಯೆಯತ್ತ ಬೆರಳು ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ಕುರುಬ ಸಮಾಜಕ್ಕೆ ಎಸ್‌ಟಿ ಮೀಸಲಾತಿ ನೀಡಲು ಆಗ್ರಹಿಸಿ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗವಹಿಸುವೆ. ಅರ್ಹ ಸಮುದಾಯಗಳಿಗೆ ಮೀಸಲಾತಿ ಸಿಗಬೇಕೆನ್ನುವ ತಮ್ಮ ನಿಲುವಿಗೆ ಬದ್ಧ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.