ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿನ್‌ ನಾರಾಯಣ್ ವಿರುದ್ಧದ ವಿಚಾರಣೆ ತಡೆ ಮುಂದುವರಿಕೆ

Last Updated 29 ಆಗಸ್ಟ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ, ತೆರಿಗೆ ವಂಚನೆ ಹಾಗೂ ಸುಳ್ಳು ಮಾಹಿತಿ ನೀಡಿದ ಆರೋಕ್ಕೆ ಸಂಬಂಧಿಸಿದಂತೆ ಉದ್ಯಮಿ ಸಚಿನ್ ನಾರಾಯಣ್ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರಣೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಮತ್ತೊಂದು ವಾರ ವಿಸ್ತರಿಸಿದೆ.

ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಈ ಕುರಿತ ಅರ್ಜಿಯನ್ನು ವಿಚಾರಣೆ ನಡೆಸಿ, ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ಸೆಪ್ಟೆಂಬರ್ 6ವರೆಗೂ ವಿಸ್ತರಿಸಿ ಆದೇಶಿಸಿದೆ.

ಪ್ರಕರಣವೇನು?: ಕಳೆದ ವರ್ಷ ಡಿ.ಕೆ.ಶಿವಕುಮಾರ್ ಅವರ ನಿವಾಸ ಹಾಗೂ ದೆಹಲಿಯ ಕರ್ನಾಟಕ ಭವನ, ಸಫ್ದರ್ ಜಂಗ್ ಫ್ಲ್ಯಾಟ್‌ಗಳ ಮೇಲೆ ಐ.ಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಹಣ, ಡೈರಿ ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಇದರನ್ವಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ಆಪ್ತರೂ ಆಗಿರುವ ಸಚಿನ್ ನಾರಾಯಣ್ ವಿರುದ್ಧ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.

‘ನನ್ನ ವಿರುದ್ಧದ ಪ್ರಾಸಿಕ್ಯೂಷನ್‌ಗೆ ಆದಾಯ ತೆರಿಗೆ ಇಲಾಖೆ ಪ್ರಧಾನ ನಿರ್ದೇಶಕರು ನೀಡಿದ್ದ ಪೂರ್ವಾನುಮತಿ ಮತ್ತು ವಿಶೇಷ ನ್ಯಾಯಾಲಯ ಜಾರಿಗೊಳಿಸಿರುವ ಸಮನ್ಸ್ ರದ್ದುಪಡಿಸಬೇಕು’ ಎಂದು ಕೋರಿ ಸಚಿನ್ ನಾರಾಯಣ್ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT