ಹುಬ್ಬಳ್ಳಿ: ಆನ್‌ಲೈನ್ ಶಿಕ್ಷಣ ನೀಡುವುದರಲ್ಲಿ ಅನಾನುಕೂಲಗಳೇ ಹೆಚ್ಚಾಗಿವೆ. ಒಂದರಿಂದ 12ನೇ ತರಗತಿ ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ನೀಡುವುದನ್ನು ಕೈಬಿಡಬೇಕು ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ.

ಈ ಕುರಿತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ್ ಅವರಿಗೆ ಬರೆದಿರುವ ಪತ್ರದಲ್ಲಿ, ಆನ್‌ಲೈನ್ ಪಾಠ ವಿದ್ಯಾರ್ಥಿಗಳಿಗೆ ಅರ್ಥವಾಗಿದೆಯೇ? ನಿರಂತರವಾಗಿ ಆನ್‌ಲೈನ್‌ನಲ್ಲಿ ಪಾಠ ಕೇಳುವುದರಿಂದ ಆರೋಗ್ಯದ ಮೇಲೆಯೂ ಪರಿಣಾಮ ಬೀರುತ್ತದೆ ಎಂಬ ಬಗ್ಗೆ ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಗ್ರಾಮೀಣ ಪ್ರದೇಶ ಮಕ್ಕಳಲ್ಲಿ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್, ಕಂಪ್ಯೂಟರ್ ಇಲ್ಲ. ಫೋನ್‌ಗಳಿದ್ದರೂ ನೆಟ್‌ವರ್ಕ್ ಸಮಸ್ಯೆ ಇದೆ. ಲಕ್ಷಾಂತರ ಮಕ್ಕಳ ಭವಿಷ್ಯದ ವಿಷಯ ಇದು. ಎಲ್ಲ ರೀತಿಯ ಪರಿಣಾಮ ಯೋಚಿಸಿ, ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.