ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗೌಡರ ಕುಟುಂಬದ ವಿರುದ್ಧ ಅಪಪ್ರಚಾರ ನಿಲ್ಲಿಸಿ: ಒಕ್ಕಲಿಗರ ಸಂಘದ ಅಧ್ಯಕ್ಷ ಬಾಲಕೃಷ್ಣ

Published 19 ಆಗಸ್ಟ್ 2024, 16:13 IST
Last Updated 19 ಆಗಸ್ಟ್ 2024, 16:13 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬದ ವಿರುದ್ಧ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ಆಗ್ರಹಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಳಿ ವಯಸ್ಸಿನಲ್ಲಿ ದೇವೇಗೌಡರು ರಾಜ್ಯಸಭೆಯಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಸರ್ಕಾರ ಕ್ರಮ ಕೈಗೊಳ್ಳಲಿ. ‘ಪವರ್‌ ಟಿ.ವಿ’ ಸುದ್ದಿ ವಾಹಿನಿಯಲ್ಲಿ ಅವರ ಕುಟುಂಬದ ತೇಜೋವಧೆ ಮಾಡುವಂತಹ ವರದಿ ಪ್ರಸಾರ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.

ನಿರ್ದೇಶಕ ಕೆ.ವಿ.ಶ್ರೀಧರ್ ಮಾತನಾಡಿ, ‘ಸಮುದಾಯದ ನಾಯಕರ ಬಗ್ಗೆ ಆಧಾರ ರಹಿತ ಸುದ್ದಿ ಪ್ರಸಾರ ಮಾಡಿದರೆ ಸಹಿಸುವುದಿಲ್ಲ. ಈ ಬಗ್ಗೆ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಸಂಘದ ಪದಾಧಿಕಾರಿಗಳು ಮಂಗಳವಾರ ಭೇಟಿ ಮಾಡಿ, ಸಲಹೆ, ಮಾರ್ಗದರ್ಶನ ಪಡೆದು ಮುಂದಿನ ಹೋರಾಟದ ಬಗ್ಗೆ ನಿರ್ಧರಿಸಲಾಗುವುದು’ ಎಂದರು.

ಗೋಷ್ಠಿಯಲ್ಲಿ ಉಪಾಧ್ಯಕ್ಷ ಪ್ರಕಾಶ್, ನಿರ್ದೇಶಕ ಆಂಜನಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT