ಶನಿವಾರ ಮತ್ತು ಭಾನುವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಆಗಸ್ಟ್ 22ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.