ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಮುಂಬೈ ಸೇರಿದ್ದ ಶಾಸಕರ ಪೈಕಿ ಕಾಂಗ್ರೆಸ್‌ನ ಐವರು ಅನರ್ಹ ಶಾಸಕರುಸೋಮವಾರ ಮುಂಜಾನೆ ಬೆಂಗಳೂರಿಗೆ ಆಗಮಿಸಿದ್ದಾರೆ.

ರಾಜರಾಜೇಶ್ವರಿ ನಗರ ಕ್ಷೇತ್ರದ ಮುನಿರತ್ನ, ಕೆ.ಆರ್.ಪುರದ ಬೈರತಿ ಬಸವರಾಜು, ಹೊಸಕೋಟೆಯ ಎಂಟಿಬಿ ನಾಗರಾಜ್, ಯಶವಂತಪುರದ ಎಸ್.ಟಿ ಸೋಮಶೇಖರ್, ಯಲ್ಲಾಪುರದ ಶಿವರಾಮ್ ಹೆಬ್ಬಾರ್ ಅವರು ಮುಂಬೈನಿಂದ ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಯಾರೊಬ್ಬರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲಿಲ್ಲ. ಅನರ್ಹ ಶಾಸಕರು ಬೆಂಗಳೂರಿಗೆ ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

ಭಿನ್ನಮತೀಯ ಚಟುವಟಿಕೆಯಲ್ಲಿ ಗುರುತಿಸಿಕೊಂಡಿದ್ದ ಒಟ್ಟು 17ಶಾಸಕರು ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಮುಂಬೈ ಹಾರಿದ್ದರು. ಪಕ್ಷದ ವಿಪ್ ಉಲ್ಲಂಘನೆ, ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ 17 ಶಾಸಕರನ್ನೂ ಸ್ಪೀಕರ್ ರಮೇಶ್‌ಕುಮಾರ್ ಅವರು ಅನರ್ಹಗೊಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.