ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆಯಲ್ಲಿ ಎಸ್‌ಟಿಪಿಐ ಕೇಂದ್ರ: ವೈಷ್ಣವ್‌

Published 7 ಆಗಸ್ಟ್ 2024, 14:38 IST
Last Updated 7 ಆಗಸ್ಟ್ 2024, 14:38 IST
ಅಕ್ಷರ ಗಾತ್ರ

ನವದೆಹಲಿ: ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧೀನದ ಸಾಫ್ಟ್‌ವೇರ್‌ ಟೆಕ್ನಾಲಜಿ ಪಾರ್ಕ್ಸ್‌ ಆಫ್‌ ಇಂಡಿಯಾ (ಎಸ್‌ಟಿಪಿಐ) ದಾವಣಗೆರೆಯಲ್ಲಿ ತನ್ನ ಕೇಂದ್ರ ತೆರೆದಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದರು. 

ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬುಧವಾರ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ‘ಈ ಕೇಂದ್ರವು ಐಟಿ ಸಂಬಂಧಿಸಿದ ಸೇವೆಗಳು, ನವೋದ್ಯಮಗಳು ಹಾಗೂ ಉದ್ಯಮಿಗಳಿಗೆ ತರಬೇತಿ ಮತ್ತಿತರ ಸೇವೆಗಳನ್ನು ಒದಗಿಸುತ್ತದೆ’ ಎಂದರು. 

ಪ್ರಭಾ ಮಲ್ಲಿಕಾರ್ಜುನ್‌ ಮಾತನಾಡಿ, ‘ದಾವಣಗೆರೆಯ ಸುತ್ತಮುತ್ತ 15 ಎಂಜಿನಿಯರಿಂಗ್‌ ಕಾಲೇಜುಗಳಿವೆ. ಪ್ರತಿವರ್ಷ ಸಾವಿರಾರು ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಕಾಲೇಜುಗಳಿಂದ ಹೊರಬರುತ್ತಿದ್ದಾರೆ. ದಾವಣಗೆರೆಯನ್ನು ಮಾಹಿತಿ ತಂತ್ರಜ್ಞಾನದ ಹಬ್‌ ಆಗಿ ಪರಿವರ್ತಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆಯಾ’ ಎಂದು ‍ಪ್ರಶ್ನಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT